Log In
BREAKING NEWS >
ಅದಮಾರು ಮಠದ ಮು೦ದಿನ ಪರ್ಯಾಯದ ಸ್ವಾಗತ ಕಮಿಟಿಯ ಕಚೇರಿಯನ್ನು ಸೋಮವಾರದ೦ದು ಪರ್ಯಾಯ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಉದ್ಘಾಟಿಸಿದರು.ಅದಮಾರು ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಗೋವಿ೦ದ ರಾಜ್ ಹಾಗೂ ಇತರರು ಹಾಜರಿದ್ದರು. .......ಅಗಸ್ಟ್ 23ಮತ್ತು 24ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮ ಜರಗಲಿದೆ......

ನೂತನ ಸಂಸತ್​ ಭವನ ನಿರ್ಮಾಣಕ್ಕೆ ಚಿಂತನೆ: ಲೋಕಸಭೆ ಸ್ಪೀಕರ್​ ಓಂ ಬಿರ್ಲಾ

ನವದೆಹಲಿ: ನೂತನ ಸಂಸತ್​ ಭವನವನ್ನು ನಿರ್ಮಾಣಕ್ಕೆ ಗಂಭೀರ ಚಿಂತನೆ ನಡೆಸಲಾಗುತ್ತಿದೆ,  ಆದರೆ ಈ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಲೋಕಸಭೆ ಸ್ಪೀಕರ್​ ಓಂ ಬಿರ್ಲಾ ತಿಳಿಸಿದ್ದಾರೆ.

ಬಹಳ ದಿನಗಳಿಂದ ನೂತನ ಸಂಸತ್ ಭವನ ನಿರ್ಮಾಣದ ಕುರಿತು ಸುದ್ದಿಗಳು ಕೇಳಿಬರುತ್ತಿತ್ತಾದರೂ, ಈ ಕುರಿತಂತೆ ಅಧಿಕೃತ ಹೇಳಿಕೆಗಳು ಹೊರ ಬಿದ್ದಿರಲಿಲ್ಲ. ಇದೀಗ ಇದೇ ಮೊದಲ ಬಾರಿ ಎಂಬಂತೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮಾಹಿತಿ ನೀಡಿದ್ದು, ಶೀಘ್ರ ಈ ಕುರಿತು ನಿರ್ಣಯ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಓಂ ಬಿರ್ಲಾ, ‘ನೂತನ ಸಂಸತ್​ ಭವನದ ಅವಶ್ಯಕತೆ ಇರುವುದು ಕಂಡು ಬಂದಿದೆ. ಹಾಗಾಗಿ ತಜ್ಞರು, ಸಂಸದರು ಅಭಿಪ್ರಾಯ ಸಂಗ್ರಹಿಸಲು ಹಲವು ತಂಡಗಳನ್ನು ರಚಿಸಲಾಗಿದೆ. ಇವರು ನೀಡುವ ವರದಿ ಆಧರಿಸಿ ಆಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಅಂತೆಯೇ ಈಗಿರುವ ಸಂಸತ್​ ಭವನವನ್ನೇ ನವೀಕರಿಸುವ ಕುರಿತೂ ಚಿಂತಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ನವಭಾರತ ಯೋಜನೆಯಲ್ಲಿ ಭಾರತದ 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಸಂಸತ್​ ಭವನದ ನವೀಕರಣ ಅಥವಾ ವಿಸ್ತರಣೆ ಮಾಡುವ ಕುರಿತು ಚಿಂತಿಸಬೇಕು ಎಂದು ಬಿರ್ಲಾ ಹೇಳಿದ್ದಾರೆ.

No Comments

Leave A Comment