Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಮತ್ತೆ ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಗುಂಡಿನ ದಾಳಿ; ಯೋಧ ಹುತಾತ್ಮ

ಜಮ್ಮು: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆ ಸಮೀಪದ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಪಡೆ ನಡೆಸಿದ ದಾಳಿಯಲ್ಲಿ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ಶನಿವಾರ ನಡೆದಿದೆ.

ಗಡಿನಿಯಂತ್ರಣ ರೇಖೆ ಬಳಿ ಭಾರತೀಯ ಸೇನಾಪಡೆಯ ದಾಳಿಗೆ ಪಾಕಿಸ್ತಾನದ ನಾಲ್ಕು ಸೈನಿಕರು ಸಾವನ್ನಪ್ಪಿರುವುದಾಗಿ ಹೇಳಿಕೆ ನೀಡಿದ ಎರಡು ದಿನದ ಬಳಿಕ ಕದನ ವಿರಾಮ ಉಲ್ಲಂಘಿಸಿ ಪಾಕ್ ಈ ದಾಳಿ ನಡೆಸಿದೆ ಎಂದು ವರದಿ ತಿಳಿಸಿದೆ.

ಡೆಹ್ರಾಡೂನ್ ನಿವಾಸಿ ಲ್ಯಾನ್ಸ್ ನಾಯಕ್ ಸಂದೀಪ್ ಥಾಪಾ(35) ಅವರು ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಹುತಾತ್ಮರಾಗಿರುವುದಾಗಿ ರಕ್ಷಣಾ ವಕ್ತಾರರ ಪ್ರಕಟಣೆ ವಿವರಿಸಿದೆ.

ಶನಿವಾರ ಮುಂಜಾನೆಯಿಂದಲೇ ರಜೌರಿ ಜಿಲ್ಲೆಯ ಗಡಿನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಪಡೆ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಭಾರತೀಯ ಪಡೆ ಪ್ರತಿದಾಳಿ ನಡೆಸಿ ತಕ್ಕ ಉತ್ತರ ನೀಡಿರುವುದಾಗಿ ವರದಿ ತಿಳಿಸಿದೆ.

No Comments

Leave A Comment