Log In
BREAKING NEWS >
ಅರ್ಧಕ್ಕೆ ನಿಂತ ಪರ್ಕಳ ರಾ. ಹೆದ್ದಾರಿ ಕಾಮಗಾರಿ: ಅಂಗಡಿ, ಮನೆಯೊಳಗೆ ಕೆಸರು ನೀರು....

ಪಶ್ಚಿಮಬಂಗಾಳ; ಶ್ರೀಕೃಷ್ಣಜನ್ಮಾಷ್ಠಮಿ ನೂಕುನುಗ್ಗಲು, ಕಾಲ್ತುಳಿತಕ್ಕೆ ನಾಲ್ವರು ಭಕ್ತರ ಸಾವು

ಕೋಲ್ಕತಾ:ಶ್ರೀಕೃಷ್ಣ ಜನ್ಮಾಷ್ಠಮಿ ಹಿನ್ನೆಲೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದ ವೇಳೆ ದೇವಾಲಯದ ಗೋಡೆ ಕುಸಿದ ಪರಿಣಾಮ ಸಂಭವಿಸಿದ ಕಾಲ್ತುಳಿತಕ್ಕೆ ನಾಲ್ವರು ಭಕ್ತರು ಸಾವನ್ನಪ್ಪಿರುವ ಘಟನೆ ಪಶ್ಚಿಮಬಂಗಾಳದ ಉತ್ತರ 24 ಪರಾಗಣ್ ಜಿಲ್ಲೆಯ ಕಚುವಾದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಮಾಧ್ಯಮಗಳ ವರದಿ ಪ್ರಕಾರ, ದೇವಾಲಯದ ಗೋಡೆ ಕುಸಿದ ಪರಿಣಾಮ ಭಕ್ತರು ಗಾಬರಿಯಿಂದ ಓಡಿದ ಪರಿಣಾಮ ಕಾಲ್ತುಳಿತ ಸಂಭವಿಸಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವಾರು ಭಕ್ತರು ಗಾಯಗೊಂಡಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಠಮಿ ನಿಮಿತ್ತ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರು ಎಂದು ವರದಿ ವಿವರಿಸಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

No Comments

Leave A Comment