Log In
BREAKING NEWS >
"ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರೆಯ ಶುಭಾಶಯಗಳು"-ನಾಡಿನೆಲ್ಲೆಡೆಯಲ್ಲಿ ಮಹಾಶಿವರಾತ್ರೆಯ ಸ೦ಭ್ರಮ:ಶಿವನ ದೇವಾಲಯಗಳಲ್ಲಿ ಜನಜ೦ಗುಲಿ

ಸಿಂಧು ಭಾರತದ ಹೆಮ್ಮೆ : ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ: ಸ್ವಿಝರ್ ಲ್ಯಾಂಡ್ ನ ಬಾಸೆಲ್ ನಲ್ಲಿ ನಡೆದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಕೂಟದಲ್ಲಿ ಭಾರತಕ್ಕೆ ಪ್ರಪ್ರಥಮ ಚಿನ್ನ ಗೆಲ್ಲುವ ಮೂಲಕ ಮಹಿಳಾ ಬ್ಯಾಡ್ಮಿಂಟನ್ ಲೋಕದ ಚಾಂಪಿಯನ್ ಪಟ್ಟ ಅಲಂಕರಿಸಿದ ಸಾಧನೆ ಮಾಡಿದ ಪಿ.ವಿ. ಸಿಂಧು ಅವರು ಇಂದು ಭಾರತಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಬಳಿಕ ಸಿಂಧು ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಸಿಂಧು ಅವರು ಕೇವಲ ದೇಶದ ಹೆಮ್ಮೆ ಮಾತ್ರವಲ್ಲ ಅವರು ವಿಶ್ವ ಬ್ಯಾಡ್ಮಿಂಟನ್ ಲೋಕದ ಹೆಮ್ಮೆ ಎಂದು ಪ್ರಧಾನಿ ಮೋದಿ ಅವರು ಇದೇ ಸಂದರ್ಭದಲ್ಲಿ ಸಿಂಧು ಸಾಧನೆಯನ್ನು ಶ್ಲಾಘಿಸಿದರು.

No Comments

Leave A Comment