ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಎಸ್.ಈಶ್ವರಪ್ಪ ನೇಮಕ
ಶಿವಮೊಗ್ಗ : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ಘೋಷಣೆ ಮಾಡಿದ್ದು, ಕೆ.ಎಸ್.ಈಶ್ವರಪ್ಪ ಅವರು ನೂತನ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾಗಿರುವ ಕೆ.ಎಸ್. ಈಶ್ವರಪ್ಪ ಅವರು ಬಿ ಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾರೆ.
ಜಿಲ್ಲಾ ಉಸ್ತುವಾರಿಯಾಗಿ ನೇಮಕ ಗೊಳಿಸಿದ್ದಕ್ಕಾಗಿ ಈಶ್ವರಪ್ಪ ಅವರು ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದರು.