Log In
BREAKING NEWS >
ಸಮಸ್ತ ಜನತೆಗೆ,ನಮೆಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ``````` ಶ್ರೀಕೃಷ್ಣ ಜನ್ಮಾಷ್ಟಮಿಯ(ಚ೦ದ್ರಾ) ಶುಭಾಶಯಗಳು``````ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಪ್ರವಾಹದಿಂದ ಹಾನಿಯಾದ ಮನೆಗಳಿಗೆ ಶಾಶ್ವತ ಪರಿಹಾರ ನೀಡಿ: ಸಿದ್ದರಾಮಯ್ಯ ಆಗ್ರಹ

ಮಂಗಳೂರು:  ಯಾವುದೇ ಮುಂಜಾಗೃತ ಕ್ರಮ ಕೈಗೊಳ್ಳದೆ ಅವೈಜ್ಞಾನಿಕವಾಗಿ ಪಚ್ಚನಾಡಿಯಲ್ಲಿ  ತ್ಯಾಜ್ಯ ಸಂಗ್ರಹ ಮಾಡಿದ್ದರಿಂದ ನೆರೆ ಸಂದರ್ಭದಲ್ಲಿ ಬಹಳಷ್ಟು ಮನೆಗಳಿಗೆ ಹಾನಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪಚ್ಚನಾಡಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಮಾತನಾಡಿದ ಅವರು,  ಈ ಭಾಗದಲ್ಲಿ ತ್ಯಾಜ್ಯ ಹಾಕುವ ಮೊದಲು ಮುನ್ನೆಚ್ಚರಿಕೆ ವಹಿಸಬೇಕಿತ್ತು. ಮೊದಲೇ ರಿಟೈನಿಂಗ್ ಹಾಲ್ ಹಾಕಿದ್ದರೆ ಈ ರೀತಿ ಹಾನಿ ಆಗುತ್ತಿರಲಿಲ್ಲ. ಈಗಾಗಲೇ 27 ಮನೆಗಳಿಗೆ ಹಾನಿಯಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು  ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು.  ಈ ಜಾಗವನ್ನು ಒತ್ತುವರಿ ಮಾಡಿ ಶಾಶ್ವತ  ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಡಿಕೆಶಿ ವಿಚಾರದಲ್ಲಿ ಸರ್ಕಾರ ರಾಜಕೀಯ ಮಾಡುತ್ತಿದೆ. ಕಾನೂನು ಪ್ರಕಾರ ಹೋರಾಟ ಮಾಡುವ ಮೂಲಕ ಡಿಕೆ ಶಿವಕುಮಾರ್ ಅವರು ಸಮಸ್ಯೆಯನ್ನು ಸರಿಪಡಿಸಿಕೊಳ್ಳಲಿದ್ದಾರೆ . ಕೆಪಿಸಿಸಿ ಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಿತ್ತಾಟ ಏನು ಇಲ್ಲ‌ ಎಂದು ಇದೇ ವೇಳೆ ತಿಳಿಸಿದರು .

 

 

ಬೆಳ್ತಂಗಡಿಗೆ ಆಗಮಿಸಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಕಚೇರಿಗೆ ತೆರಳಿ, ಆ ಬಳಿಕ ಪ್ರವಾಹ ಪೀಡಿತ ಚಾರ್ಮಾಡಿ ಪ್ರದೇಶಕ್ಕೆ ತೆರಳಲಿದ್ದಾರೆ. ಮಾಜಿ ಶಾಸಕ ಕೆ.ವಸಂತ ಬಂಗೇರ, ಮಾಜಿ ಸಚಿವ ಬಿ.ರಮಾನಾಥ ರೈ ಮೊದಲಾದ ಗಣ್ಯರು ಭಾಗಿಯಾಗಲಿದ್ದಾರೆ.

No Comments

Leave A Comment