Log In
BREAKING NEWS >
ತಪ್ಪಿದ ಅನಾಹುತ: ಜಮ್ಮು ಕಾಶ್ಮೀರದಲ್ಲಿ 40 ಕೆಜಿ ಸ್ಫೋಟಕ ವಶ ಪಡೆದ ಸೇನೆ....

ಡಿ ಕೆ ಶಿವಕುಮಾರ್ ಬಂಧನ; ರಾಜ್ಯದಲ್ಲಿ ಭುಗಿಲೆದ್ದ ಪ್ರತಿಭಟನೆ, 16 ಬಸ್ಸುಗಳಿಗೆ ಬೆಂಕಿ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಅಕ್ರಮ ಹಣ ವರ್ಗಾವಣೆ ಮತ್ತು ಸಂಗ್ರಹ ಪ್ರಕರಣದಲ್ಲಿ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸುತ್ತಿದ್ದಂತೆ ಇತ್ತ ಕರ್ನಾಟಕದಲ್ಲಿ ಅದನ್ನು ವಿರೋಧಿಸಿ ಪ್ರತಿಭಟನೆ ತೀವ್ರವಾಗಿದೆ.

ಕನಕಪುರ, ರಾಮನಗರ, ಚನ್ನಪಟ್ಟಣ, ಮೈಸೂರು ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದಲ್ಲಂತೂ ಇಂದು ಬೆಳಗ್ಗೆಯಿಂದಲೇ ಪ್ರತಿಭಟನಾಕಾರರು ಬೀದಿಗಳಿದು ತೀವ್ರ ಹೋರಾಟ ನಡೆಸುತ್ತಿದ್ದಾರೆ. ಇದರಿಂದ ಸಾರ್ವಜನಿಕ ಆಸ್ತಿಪಾಸ್ತಿಗಳು ಹಾನಿಯಾಗುತ್ತಿವೆ. ಕನಕಪುರ, ರಾಮನಗರಗಳ, ಚನ್ನಪಟ್ಟಣಗಳಲ್ಲಂತೂ ಪರಿಸ್ಥಿತಿ ಹೊತ್ತಿ ಉರಿಯುವಂತಾಗಿದೆ. ಈ ಭಾಗಗಳಲ್ಲಿ ಜನರು ಸ್ವಘೋಷಿತ ಬಂದ್ ನಡೆಸುತ್ತಿದ್ದಾರೆ.

ಡಿಕೆಶಿ ಬೆಂಬಲಿಗರು ಅಲ್ಲಲ್ಲಿ ರಸ್ತೆ ತಡೆ ನಡೆಸಿ ಟಯರ್ ಗಳಿಗೆ ಬೆಂಕಿ ಹಚ್ಚಿ ಬಿಜೆಪಿ ಸರ್ಕಾರ ಮತ್ತು ಜಾರಿ ನಿರ್ದೇಶನಾಲಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಂಜಾಗ್ರತೆಯಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಳೆದ ರಾತ್ರಿಯಿಂದ ಇಲ್ಲಿಯವರೆಗೆ ಸುಮಾರು 16 ಕೆಎಸ್ಆರ್ ಟಿಸಿ ಬಸ್ಸುಗಳಿಗೆ ಸಂಪೂರ್ಣವಾಗಿ ಸುಟ್ಟುಹೋಗಿವೆ. ಇವುಗಳಲ್ಲಿ ಬಹುತೇಕ ಬಸ್ಸುಗಳು ಕನಕಪುರ, ರಾಮನಗರ ಕಡೆಗೆ ಸಂಚರಿಸುವುದಾಗಿವೆ. ಕನಕಪುರಕ್ಕೆ ಹೋಗುವ ಬಸ್ಸುಗಳನ್ನು ಕೆಲಕಾಲ ತಡೆಹಿಡಿಯಲಾಗಿತ್ತು.

No Comments

Leave A Comment