Log In
BREAKING NEWS >
ತಪ್ಪಿದ ಅನಾಹುತ: ಜಮ್ಮು ಕಾಶ್ಮೀರದಲ್ಲಿ 40 ಕೆಜಿ ಸ್ಫೋಟಕ ವಶ ಪಡೆದ ಸೇನೆ....

ಬೆಂಗಳೂರು: ನಡುರಸ್ತೆಯಲ್ಲೇ ಯುವಕನ ಕೊಚ್ಚಿ ಕೊಲೆ!

ಬೆಂಗಳೂರು: ನಾಲ್ವರ ಗ್ಯಾಂಗ್ ಒಬ್ಬ ಯುವಕನನ್ನು ನಟ್ಟ ನಡುರಾತ್ರಿಯಲ್ಲೇ ಅಟ್ಟಾಡಿಸಿ ಕೊಚ್ಚಿ ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ಮಹೇಶ್ ಕುಮಾರ್ ಎಂದು ಗುರುತಿಸಲಾಗಿದ್ದು ಬೆಂಗಳೂರಿನ ಸುಂಕದಕಟ್ಟೆ ಬಳಿಯ ಹೆಗ್ಗನಹಳ್ಳಿ ಕ್ರಾಸ್ ನಲ್ಲಿ ರಾತ್ರಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ನಾಲ್ವರು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಕೃತ್ಯದ ನಂತರ ಆರೋಪಿಗಳು ಪರಾರಿಯಾಗಿದ್ದು ಹತ್ಯೆಗೆ ನಿಖರ ಕಾರಣ ತಿಳಿದಿಲ್ಲ.

ಇನ್ನು ಕೊಲೆಯಾಗಿರುವ ಮಹೇಶ್ ಕುಮಾರ್ ಸಹ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಇತ್ತೀಚೆಗೆ ಬಿಡುಗಡೆಯಾಗಿದ್ದ ಎಂದು ಪೋಲೀಸರು ಮಾಹಿತಿ ಕೊಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೋಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

No Comments

Leave A Comment