Log In
BREAKING NEWS >
ಉಡುಪಿ ಶ್ರೀಕೃಷ್ಣಾಪುರ ಮಠಾಧೀಶರ 4ನೇ ಪರ್ಯಾಯಕ್ಕೆ ಅದ್ದೂರಿಯ ಬಾಳೆ ಮುಹೂರ್ತ.........ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಮಗುವಿಗೆ ಜನ್ಮ ನೀಡೋದು ನನ್ನ ಟಾಪ್ ಲಿಸ್ಟ್‌ನಲ್ಲಿದೆ: ಪ್ರಿಯಾಂಕಾ

ಮುಂಬೈ: ಬಾಲಿವುಡ್ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಅವರು ಮನೆ ಖರೀದಿಸುವುದು ಹಾಗೂ ಮಗುವಿಗೆ ಜನ್ಮ ನೀಡುವುದು ನನ್ನ ಟಾಪ್ ಲಿಸ್ಟ್‌ನಲ್ಲಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಪ್ರಿಯಾಂಕಾ ಚೋಪ್ರಾ ಅವರು ಮ್ಯಾಗಜೀನ್ ಒಂದಕ್ಕೆ ಸಂದರ್ಶನ ನೀಡಿದ್ದರು. ಈ ವೇಳೆ ಅವರು, ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ನಾನು ಸುಮಾರು ದಿನಗಳಿಂದ ಲಾಸ್ ಏಂಜಲೀಸ್‍ನಲ್ಲಿ ಮನೆ ಹುಡುಕುತ್ತಿದ್ದೇನೆ. ಈಗಾಗಲೇ ಮುಂಬೈ ಹಾಗೂ ನ್ಯೂಯಾರ್ಕ್ ನಲ್ಲಿ ನನ್ನ ಮನೆ ಇದೆ. ಮುಂಬೈ ನೆನಪಾಗಲಿ ಎಂದು ನಾನು ಮನೆಯಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಲು ಯೋಚಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಪ್ರಿಯಾಂಕಾ, ನನ್ನ ಅಕ್ಕಪಕ್ಕ ನಾನು ಪ್ರೀತಿಸುವ ಜನರಿದ್ದರೆ ನಾನು ತುಂಬಾ ಖುಷಿಯಾಗಿರುತ್ತೇನೆ. ಈಗ ನನಗಾಗಿ ಒಂದು ಮನೆ ಖರೀದಿಸುವುದು ಹಾಗೂ ಮಗುವಿಗೆ ಜನ್ಮ ನೀಡುವುದು ನನ್ನ ಟಾಪ್ ಲಿಸ್ಟ್‌ನಲ್ಲಿ ಇದೆ.

ಕಳೆದ ವರ್ಷ ಡಿಸೆಂಬರ್ 1 ಮತ್ತು 2ರಂದು ಪ್ರಿಯಾಂಕಾ ಹಾಗೂ ನಿಕ್ ಜೋನಸ್ ಇಬ್ಬರೂ ತಮ್ಮ ಕುಟುಂಬದವರ ಸಮ್ಮುಖದಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. ಕ್ರಿಶ್ಚಿಯನ್ ಹಾಗೂ ಹಿಂದೂ ಎರಡೂ ಸಂಪ್ರದಾಯದ ಪ್ರಕಾರ ಸಪ್ತಪದಿ ತುಳಿದಿದ್ದರು. ಪ್ರಿಯಾಂಕಾ ಹಾಗೂ ನಿಕ್ ಒಟ್ಟು ಮೂರು ಆರತಕ್ಷತೆ ಮಾಡಿಕೊಂಡಿದ್ದಾರೆ. ಅಲ್ಲದೇ ತಮ್ಮ ನಾಲ್ಕನೇ ಆರತಕ್ಷತೆಯನ್ನು ಅವರು ಅಮೆರಿಕದಲ್ಲಿ ಮಾಡಿಕೊಂಡಿದ್ದರು.

No Comments

Leave A Comment