Log In
BREAKING NEWS >
ಶ್ರೀಕೃಷ್ಣಮಠದ ಮುಖ್ಯದ್ವಾರದಲ್ಲಿ ಕನ್ನಡ ನಾಮಫಲಕ ಅಳವಡಿಕೆ-ಗದ್ದಲವೆಬ್ಬಿಸಿದ ಪೆರ೦ಪಳ್ಳಿಗೆ ತೀವ್ರ ಮುಖಭ೦ಗ........ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್‌ಗಳ ನಡುವೆ ಡಿಕ್ಕಿ: 200 ಪ್ರಯಾಣಿಕರು ಪಾರು

ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ಸಿಗಂಧೂರೇಶ್ವರಿ ದೇವಾಲಯಕ್ಕೆ ಹೋಗುವ ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಅಂಬಾರಗೋಡ್ಲು ದಡದಲ್ಲಿ ಬಾರ್ಜ್ ಗಳನ್ನು ತಿರುಗಿಸುವ ವೇಳೆ ಒಂದಕ್ಕೊಂದು ಗುದ್ದಿಕೊಂಡಿರುವ ಪರಿಣಾಮ ಎರಡೂ ಬಾರ್ಜ್ ಗಳು ಜಖಂಗೊಂಡಿವೆ. ನದಿಯ ಮಧ್ಯಭಾಗದಲ್ಲೇ ಈ ಅಪಘಾತ. ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಚಾಲಕರ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದ್ದು, ಇದರಲ್ಲಿ 200 ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇವರೆಲ್ಲೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಚಾಲಕರ ನಿರ್ಲಕ್ಷ್ಯದಿಂದ ನಡೆದ ಈ ಅಪಘಾತದ ಬಗ್ಗೆ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪಘಾತದ ಬಳಿಕವೂ ಎಂದಿನಂತೆ ಬಾರ್ಜ್ ಗಳು ಸಂಚಾರ ನಡೆಸುತ್ತಿವೆ.

No Comments

Leave A Comment