Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ವಿದ್ಯುತ್ ಸ್ಪರ್ಶಿಸಿ ಒಂದೇ ಕುಟುಂಬದ ಮೂವರ ಸಾವು ಹಾಸನದಲ್ಲೊಂದು ಹೃದಯವಿದ್ರಾವಕ ಘಟನೆ

ಹಾಸನ: ವಿದ್ಯುತ್ ತಂತಿ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಚೆನ್ನರಾಯಪಟ್ಟಣ ತಾಲೂಕು ಅಗಸರಹಳ್ಳಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಭಾಗ್ಯಮ್ಮ(55), ದಾಕ್ಷಾಯಿಣಿ (35), ದಯಾನಂದ (31) ಎಂದು ಗುರುತಿಸಲಾಗಿದೆ.

ವಿದ್ಯುತ್ ಕಂಬಕ್ಕೆ  ಕಟ್ಟಿದ್ದ ತಂತಿ ಮೇಲೆ ಬಟ್ಟೆ ಒಣ ಹಾಕಲು ತೆರಳಿದ್ದಾಗ ಭಾಗ್ಯಮ್ಮ ಅವರಿಗೆ ವಿದ್ಯುತ್ ಸ್ಪರ್ಶಿಸಿದೆ.  ಇದನ್ನು ಕಂಡು ರಕ್ಷಿಸಲು ತೆರಳಿದ್ದ ದಾಕ್ಷಾಯಿಣಿ ಮತ್ತು ದಯಾನಂದ ಅವರಿಗೂ ವಿದ್ಯುತ್ ಸ್ಪರ್ಶಿಸಿದ್ದು ಮೂವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಮತ್ತೋರ್ವನ  ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

ಚೆನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment