Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಸೊಪೋರ್ ಎನ್’ಕೌಂಟರ್: ಎಲ್ಇಟಿ ಉಗ್ರ ಆಸೀಫ್ ಹತ, ಇಬ್ಬರು ಪೊಲೀಸರಿಗೆ ಗಾಯ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸೊಪೋರ್’ನಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಪಾಕಿಸ್ತಾನ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ.

ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸೇನಾ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿವೆ. ಬಳಿಕ ಎನ್ ಕೌಂಟರ್ ನಡೆಸಲು ಆರಂಭಿಸಿದ ಸೇನಾಪಡೆ ಉಗ್ರನ ಗುಂಡಿಗೆ ದಿಟ್ಟ ಉತ್ತರ ನೀಡಿ, ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಪ್ರಸ್ತುತ ಬಂಧನಕ್ಕೊಳಗಾಗಿರುವ ಉಗ್ರನನ್ನು ಆಸೀಫ್ ಶಪಿ ಅಲಾಮ್ ಎಂದು ಗುರ್ತಿಸಲಾಗಿದ್ದು, ಈತ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಭಯೋತ್ಪಾದಕನೆಂದು ಹೇಳಲಾಗುತ್ತಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ ಎಂದು ಅಧಇಕಾರಿಗಳು ತಿಳಿಸಿದ್ದಾರೆ.

ಸಾವನ್ನಪ್ಪಿರುವ ಉಗ್ರ  ಆಸೀಫ್, ಕೆಲ ದಿನಗಳ ಹಿಂದೆ ಸೊಪೋರ್ ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆಸಿದ್ದ. ದಾಳಿಯಲ್ಲಿ ವ್ಯಾಪಾರಿ ಸೇರಿ ಮೂವರು ಗಾಯಗೊಂಡಿದ್ದರು.

No Comments

Leave A Comment