Log In
BREAKING NEWS >
ಉಡುಪಿ ಶ್ರೀಕೃಷ್ಣಾಪುರ ಮಠಾಧೀಶರ 4ನೇ ಪರ್ಯಾಯಕ್ಕೆ ಅದ್ದೂರಿಯ ಬಾಳೆ ಮುಹೂರ್ತ.........ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

100 ಕೋಟಿ ರೂ. ಆಸ್ತಿ ಎಲ್ಲಿಂದ ಬಂತು? ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ತೀವ್ರ ವಿಚಾರಣೆ

ನವದೆಹಲಿ:ವಿವಿಧ ಕಂಪನಿಗಳಲ್ಲಿ ಹೂಡಿಕೆ ಮಾಡಿರುವ ಸಂಬಂಧ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಗುರುವಾರ ಜಾರಿ ನಿರ್ದೇಶನಾಲಯದ ವಿಚಾರಣೆ ಹಾಜರಾಗಿದ್ದು, ಇ.ಡಿ.ಅಧಿಕಾರಿಗಳು ಮಧ್ಯಾಹ್ನದ ನಂತರವೂ ತೀವ್ರ ವಿಚಾರಣೆಗೆ ಒಳಪಡಿಸಿರುವುದಾಗಿ ಮೂಲಗಳು ತಿಳಿಸಿವೆ.

108 ಕೋಟಿ ರೂಪಾಯಿ ಮೌಲ್ಯದ ಆಸ್ತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಸೆ.12ರಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.

ಇಂದು ಐಶ್ವರ್ಯ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದು, ಈ ಸಂದರ್ಭದಲ್ಲಿ ತಂದೆ ಡಿಕೆ ಶಿವಕುಮಾರ್ ಅವರನ್ನೂ ಕೂಡಾ ಅಧಿಕಾರಿಗಳು ವಿಚಾರಣೆಗೆ ಕರೆ ತಂದಿರುವುದಾಗಿ ವರದಿ ವಿವರಿಸಿದೆ.

 

23 ವರ್ಷದ ಐಶ್ವರ್ಯಗೆ ಇಷ್ಟೊಂದು ಆಸ್ತಿ ಎಲ್ಲಿಂದ ಬಂತು? ಎಲ್ಲೆಲ್ಲಿ ಹೂಡಿಕೆ ಮಾಡಿದ್ದೀರಿ? ಮಗಳ ಹೆಸರಿನಲ್ಲಿ ತಂದೆ ಎಷ್ಟು ಹೂಡಿಕೆ ಮಾಡಿದ್ದಾರೆ ಎಂಬಿತ್ಯಾದಿ ಕುರಿತು ಇ.ಡಿ ಅಧಿಕಾರಿಗಳು ಪ್ರಶ್ನಿಸಿದ್ದಾರೆನ್ನಲಾಗಿದೆ.

ಡಿಕೆ ಪುತ್ರಿ ಐಶ್ವರ್ಯ ಹೆಸರಿನಲ್ಲಿ 2013ರಲ್ಲಿ ಒಂದು ಕೋಟಿ ರೂಪಾಯಿ ಆಸ್ತಿ ಇದ್ದಿದ್ದು, 2018ರ ವೇಳೆಗೆ ಅದು 100 ಕೋಟಿಗಿಂತಲೂ ಹೆಚ್ಚಾಗಿರುವುದರಿಂದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. 2017ರಲ್ಲಿ ಡಿಕೆ ಶಿವಕುಮಾರ್ ಮತ್ತು ಐಶ್ವರ್ಯ ಸಿಂಗಾಪೂರ್ ಗೆ ತೆರಳಿದ್ದರು. ಈ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.

No Comments

Leave A Comment