Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ 91ನೇ ಭಜನಾ ಸಪ್ತಾಹ ಮಹೋತ್ಸವದ ನಗರ ಭಜನೆಯು ಭಾನುವಾರ ಸ೦ಜೆ 4.30ಕ್ಕೆ ದೇವಸ್ಥಾನದಿ೦ದ ಹೊರಡಲಿದೆ..........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಮಂಗಳೂರು: ‘ಗಿರಿಗಿಟ್’ ಚಿತ್ರ ಪ್ರದರ್ಶಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ

ಮಂಗಳೂರು:: ಭರ್ಜರಿ ಪ್ರದರ್ಶನದೊಂದಿಗೆ ಕೋಸ್ಟಲ್ ವುಡ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಇತ್ತೀಚೆಗೆ ತೆರೆಕಂಡ ತುಳು ಚಿತ್ರ ‘ಗಿರಿಗಿಟ್’ ಗೆ ಸಂಕಷ್ಟ ಎದುರಾಗಿದೆ. ‘ಗಿರಿಗಿಟ್’ ಚಿತ್ರಕ್ಕೆ ಮಂಗಳೂರು ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಚಿತ್ರದಲ್ಲಿ ನ್ಯಾಯಾಂಗ ನಿಂದನೆ ಮತ್ತು ವಕೀಲರಿಗೆ ಅವಹೇಳನ ಮಾಡಿದ್ದಾರೆ ಎಂದು ವಕೀಲರ ಸಂಘ ಆಕ್ರೋಶ ವ್ಯಕ್ತಪಡಿಸಿ. ಅಲ್ಲದೆ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಬಗ್ಗೆ ಪರಿಶೀಲಿಸಿದ ನ್ಯಾಯಾಲಯವು ಚಿತ್ರವನ್ನು ತಕ್ಷಣದಿಂದ ತಡೆಹಿಡಿಯಬೇಕು ಎಂದು ಮಂಗಳೂರು ಕಿರಿಯ ಪ್ರಧಾನ ನ್ಯಾಯಾಧೀಶರಾದ ಹರೀಶ್ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ. ಈ ಬಗ್ಗೆ ವಕೀಲರ ಸಂಘದ ಪರ ಹಿರಿಯ ನ್ಯಾಯಾವಾದಿ ಎಂ.ಪಿ.ಶೆಣೈ ವಾದ ಮಂಡಿಸಿದ್ದರು.

No Comments

Leave A Comment