Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಪಿಎಸ್ ಎ ಕಾಯ್ದೆಯಡಿ ಫಾರೂಖ್ ಅಬ್ದುಲ್ಲಾಗೆ ಗೃಹಬಂಧನ; 2 ವರ್ಷ ಬಿಡುಗಡೆ ಇಲ್ಲ?

ಜಮ್ಮು-ಕಾಶ್ಮೀರ:ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಶನಲ್ ಕಾನ್ಫರೆನ್ಸ್ ಮುಖಂಡ ಫಾರೂಖ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ರಕ್ಷಣಾ ಕಾಯ್ಡೆ(ಪಿಎಸ್ಎ)ಯಡಿ ಬಂಧಿಸಿ ಶ್ರೀನಗರದಲ್ಲಿ ಗೃಹ ಬಂಧನದಲ್ಲಿ ಇರಿಸಲಾಗಿದೆ.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರಕಾರ ರದ್ದುಗೊಳಿಸಿದ ನಂತರ(ಆಗಸ್ಟ್ 5) ಫಾರೂಖ್ ಅಬ್ದುಲ್ಲಾ ಅವರನ್ನು ಗೃಹಬಂಧನದಲ್ಲಿ ಇಟ್ಟಿತ್ತು. ಯಾವುದೇ ಒಬ್ಬ ವ್ಯಕ್ತಿಯನ್ನು ಪಿಎಸ್ ಎ ಕಾಯ್ದೆಯಡಿ ವಿಚಾರಣೆ ನಡೆಸದೇ ಎರಡು ವರ್ಷಗಳ ಕಾಲಾವಧಿವರೆಗೆ ಬಂಧಿಸಿಡುವ ಅಧಿಕಾರ ಸರಕಾರಕ್ಕೆ ಇದೆ ಎಂದು ವರದಿ ತಿಳಿಸಿದೆ. ಆ ನಿಟ್ಟಿನಲ್ಲಿ ಭಾನುವಾರ ರಾತ್ರಿ ಪಿಎಸ್ ಎ ಕಾಯ್ದೆಯಡಿ ಅಬ್ದುಲ್ಲಾ ಅವರನ್ನು ಗೃಹಬಂಧನದಲ್ಲಿ ಇರಿಸಲು ಸರಕಾರ ನಿರ್ಧರಿಸಿದೆ ಎಂದು ವರದಿ ವಿವರಿಸಿದೆ.

ಪಿಎಸ್ ಎ ಕಾಯ್ದೆಯಡಿ ಬಂಧಿಸಿದ ಹಿನ್ನೆಲೆಯಲ್ಲಿ ಫಾರೂಖ್ ಅಬ್ದುಲ್ಲಾ ಇನ್ಮುಂದೆ ಯಾವುದೇ ಸಂಬಂಧಿಕರು, ಗೆಳೆಯರ ಜತೆ ಸಭೆ ನಡೆಸುವಂತಿಲ್ಲ. ಇದಕ್ಕೂ ಮೊದಲು ಕಾಶ್ಮೀರದ ಮುಖಂಡ ಶಾ ಫೈಸಲ್ ಅವರನ್ನು ಕೂಡಾ ಪಿಎಸ್ ಎ ಕಾಯ್ದೆಯಡಿ ಬಂಧಿನದಲ್ಲಿ ಇಡಲಾಗಿತ್ತು ಎಂದು ವರದಿ ತಿಳಿಸಿದೆ.

ಫಾರೂಖ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿತ್ತು ಎಂಬ ಪ್ರತಿಪಕ್ಷಗಳ ಆರೋಪವನ್ನು ಗೃಹ ಸಚಿವ ಅಮಿತ್ ಶಾ ಈ ಹಿಂದೆ ಪ್ರತಿಕ್ರಿಯೆ ನೀಡಿದ್ದರು. ಇದೀಗ ಫಾರೂಖ್ ಅಬ್ದುಲ್ಲಾ ಅವರನ್ನು ಪಿಎಸ್ ಎ ಕಾಯ್ದೆಯಡಿ ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಅಧಿಕೃತವಾಗಿ ಸ್ಪಷ್ಟಪಡಿಸಿದೆ.

No Comments

Leave A Comment