Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ 91ನೇ ಭಜನಾ ಸಪ್ತಾಹ ಮಹೋತ್ಸವದ ನಗರ ಭಜನೆಯು ಭಾನುವಾರ ಸ೦ಜೆ 4.30ಕ್ಕೆ ದೇವಸ್ಥಾನದಿ೦ದ ಹೊರಡಲಿದೆ..........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಹೊಸಂಗಡಿ: ಬೈಕ್ ನಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿ ಮೀನಿನ ಲಾರಿಯಡಿಗೆ ಬಿದ್ದು ಮೃತ್ಯು

ಹೊಸಂಗಡಿ:ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಬೈಕು ಹಾಗೂ ಮುಂಭಾಗದಿಂದ ಬರುತ್ತಿದ್ದ ಸ್ಕೂಟರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟ ಘಟನೆ ಸೆ. 18 ರ ಬುಧವಾರ ಬೆಳಗ್ಗೆ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಂಗಡಿಯ ಅಬಕಾರಿ ಚೆಕ್ ಪೋಸ್ಟ್ ಬಳಿ ಸಂಭವಿಸಿದೆ.

 

ಮಂಗಳೂರು ಪದವಿ ಕಾಲೇಜಿನ ವಿದ್ಯಾರ್ಥಿಯಾದ ಬೇಕೂರು ಕುಬಣೂರು ದೇರ್ ಜಾಲು ಅಬ್ದುಲ್ ರೆಹಮಾನ್ ಅವರ ಪುತ್ರ ನವಾಬ್ (22) ಮೃತಪಟ್ಟ ಯುವಕ.

ನವಾಬ್ ಇಂದು ಬೆಳಗ್ಗೆ ಕಾಲೇಜಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಾಮಂಜೂರು ಚೆಕ್ ಪೋಸ್ಟ್ ಬಳಿ ಮುಂಭಾಗದಿಂದ ಬರುತ್ತಿದ್ದ ಸ್ಕೂಟರ್ ಗೆ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ವೇಳೆ ಬೈಕ್ ಹೊಂಡಕ್ಕೆ ಬೀಳುವುದನ್ನು ತಪ್ಪಿಸಲು ಯತ್ನಿಸಿದಾಗ ರಸ್ತೆಗೆ ಬಿದ್ದ ನವಾಬ್ ಮೇಲೆ ಮೇಲೆ ಹಿಂದಿನಿಂದ ಬರುತ್ತಿದ್ದ ಮೀನಿನ ಲಾರಿ ಚಲಿಸಿ ಬೈಕ್ ನೊಂದಿಗೆ ವಿದ್ಯಾರ್ಥಿಯನ್ನು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿದೆ.

ನವಾಬ್ ದಿನವೂ ಬೈಕನ್ನು ಉಪ್ಪಳದಲ್ಲಿ ನಿಲ್ಲಿಸಿ ಬಸ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ. ಆದರೆ ಇಂದು ನವಾಬ್ ಬೈಕ್ ನಲ್ಲಿ ಕಾಲೇಜಿಗೆ ತೆರಳಿದ್ದಾನೆ. ನವಾಬ್ ನನ್ನು ತಕ್ಷಣ ಆಸ್ಪತ್ರೆಗೆ ರವಾನಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

No Comments

Leave A Comment