Log In
BREAKING NEWS >
2019ರ ವಿಶ್ವ ಸುಂದರಿ ಪ್ರಕಟ: ಭಾರತದ ಸುಮನ್ ರಾವ್ ದ್ವಿತೀಯ ರನ್ನರ್ ಅಪ್....ಫಾಸ್ಟ್ ಟ್ಯಾಗ್ ಕಡ್ಡಾಯ: ಲಾಸ್ಟ್ ಸ್ಟಾಪ್ ಬದಲಾಯಿಸಿದ ಖಾಸಗಿ ಬಸ್ ಗಳು...

ಪೊಗರು ಶೂಟಿಂಗ್ ಮುಗಿಸಿ ವಾಪಸ್ಸಾಗುತ್ತಿದ್ದಾಗ ಧ್ರುವ ಸರ್ಜಾ ಕಾರು ಅಪಘಾತ!

ಬೆಂಗಳೂರು: ಪೊಗರು ಚಿತ್ರದ ಶೂಟಿಂಗ್ ಮುಗಿಸಿ ಬಳ್ಳಾರಿಯಿಂದ ವಾಪಸ್ಸಾಗುತ್ತಿದ್ದಾಗ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ.

ಬಳ್ಳಾರಿಯಿಂದ ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಮಾರ್ಗದ ಮಧ್ಯೆ ಲಾರಿಯೊಂದು ಕಾರಿಗೆ ಗುದ್ದಿದೆ. ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಕಾರಿನ ಚಾಲಕನಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ.

ಧ್ರುವ ಸರ್ಜಾ ಸ್ನೇಹಿತರೊಂದಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಪೊಗರು ಚಿತ್ರಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಬಿಕೆ ಗಂಗಾಧರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

No Comments

Leave A Comment