ಶಿವಮೊಗ್ಗ: 28 ಅಕ್ರಮ ಗಾಂಜಾ ಗಿಡ ವಶ ಶಿವಮೊಗ್ಗ: ತಾಲೂಕಿನ ಸುತ್ತುಕೋಟೆ ಗ್ರಾಮಕ್ಕೆ ಅಬಕಾರಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ಸುಮಾರು 28 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಮಂಜಪ್ಪ ಎಂಬುವವರ ಜಮೀನಿನಲ್ಲಿ ಅಡಕೆ ಹಾಗೂ ಹತ್ತಿ ಬೆಳೆಯ ನಡುವೆ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವುದು ಬೆಳಕಿಗೆ ಬಂದಿದೆ. ಅಬಕಾರಿ ಉಪಾಧೀಕ್ಷಕ ಧರ್ಮಪ್ಪ ನೇತೃತ್ವದಲ್ಲಿ ದಾಳಿ ನಡೆಸಿ ಗಾಂಜಾ ಗಿಡಗಳು ಹಾಗೂ ಗಾಂಜಾ ಗಿಡ ಬೆಳೆದಿದ್ದ ಆರೋಪಿಯನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆಯಲಾಗಿದೆ.