Log In
BREAKING NEWS >
ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾ. ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ...

ಡಿಕೆ ಶಿವಕುಮಾರ್ ಗೆ ಜಾಮೀನು ಅರ್ಜಿ ವಜಾ, ತಿಹಾರ್ ಜೈಲೇ ಗತಿ- ಕೋರ್ಟ್ ತೀರ್ಪಿನಲ್ಲೇನಿದೆ

ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವುದಾಗಿ ಬುಧವಾರ ಸಂಜೆ ಕೋರ್ಟ್ ತೀರ್ಪು ಪ್ರಕಟಿಸಿದೆ. ಇದರಿಂದ ಡಿಕೆಶಿಗೆ ತಿಹಾರ್ ಜೈಲುವಾಸ ಮುಂದುವರಿದಂತಾಗಿದೆ.

ಇಂದು ಮಧ್ಯಾಹ್ನ 3.30ಕ್ಕೆ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತ ಆದೇಶ ಪ್ರಕಟವಾಗಬೇಕಿತ್ತು. ಆದರೆ ಸುಮಾರು ಒಂದೂವರೆ ಗಂಟೆಗಳ ಕಾಲ ಜಡ್ಜ್ ಕುಹರ್ ಅವರು ತಮ್ಮ ಕೋಣೆಯಲ್ಲಿಯೇ ಹಾಜರಾದ ವಕೀಲರ ಮಾಹಿತಿಯನ್ನು ಪಡೆದುಕೊಂಡು, 5.15ಕ್ಕೆ ಜಾಮೀನು ಅರ್ಜಿ ವಜಾಗೊಳಿಸಿರುವುದಾಗಿ ಒಂದೇ ವಾಕ್ಯದಲ್ಲಿ ತೀರ್ಪು ಪ್ರಕಟಿಸಿದ್ದರು.

ಕೋರ್ಟ್ ಗೆ ಡಿಕೆ ಶಿವಕುಮಾರ್ ಪರ ಹಾಗೂ ಜಾರಿ ನಿರ್ದೇಶನಾಲಯದ ಪರ ವಕೀಲರು ಹಾಜರಾಗಿದ್ದರು.

 

ಜಾರಿ ನಿರ್ದೇಶನಾಲಯದ ವಶದಲ್ಲಿದ್ದ ಡಿಕೆ ಶಿವಕುಮಾರ್ ಅವರ ನಿರಂತರ ವಿಚಾರಣೆ ಬಳಿಕ ದೆಹಲಿ ರೋಸ್ ಅವೆನ್ಯೂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿತ್ತು. ಕಳೆದ ಆರು ದಿನಗಳಿಂದ ಡಿಕೆ ಶಿವಕುಮಾರ್ ತಿಹಾರ್ ಜೈಲಿನಲ್ಲಿದ್ದರು.

ಸೆಪ್ಟೆಂಬರ್ 17ರಿಂದ ನ್ಯಾಯಾಂಗ ಬಂಧನದಲ್ಲಿರುವ ಡಿಕೆ ಶಿವಕುಮಾರ್ ತಮಗೆ ಜಾಮೀನು ನೀಡಬೇಕು, ವಿಚಾರಣೆಗೆ ಸಹಕರಿಸಲು ಸಿದ್ದ ಎಂದು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ವಿಚಾರಣೆ ವೇಳೆ ತಿಳಿಸಿದ್ದರು. ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವರು ವಾದ, ಪ್ರತಿವಾದ ಆಲಿಸಿದ ಬಳಿಕ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಿದ್ದರು.

ಡಿಕೆಶಿ ಜಾಮೀನಿಗಾಗಿ ವಿಶೇಷ ಪೂಜೆ:

ಮೈಸೂರಿನ ಜಾಮುಂಡಿ ಬೆಟ್ಟದಲ್ಲಿ ಡಿಕೆ ಶಿವಕುಮಾರ್ ಅಭಿಮಾನಿಗಳು ಚಾಮುಂಡೇಶ್ವರಿ ದೇವಿಗೆ ಜಾಮೀನು ಸಿಗುವಂತೆ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು.

No Comments

Leave A Comment