ಬೆಂಗಳೂರು: ಮದುವೆ ಮಾಡಿಕೊಳ್ಳುವುದಾಗಿ ಯುವತಿಯರನ್ನು ನಂಬಿಸಿ ಅತ್ಯಾಚಾರ ಎಸಗಿ ಬಳಿಕ ಗರ್ಭ ನಿರೋಧಕ ಔಷಧಿ ಎಂದು ಸಯನೈಡ್ ಕೊಟ್ಟು ಹತ್ಯೆ ಮಾಡುತ್ತಿದ್ದ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಸಯನೈಡ್ ಮೋಹನ್ಗೆ ಸಿಸಿಎಚ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
2010ರಲ್ಲಿ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರ ಕೊಲೆ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ