Log In
BREAKING NEWS >
ಜುಲೈ 15 ರಂದು ಸಿ.ಬಿ.ಎಸ್.ಸಿ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ...

ಇ.ಡಿ ಬಲೆಗೆ ಶರದ್ ಪವಾರ್? ಪೊಲೀಸ್ ತಂಡದಿಂದ ಮನೆ ಶೋಧ, ನಿಷೇಧಾಜ್ಞೆ ಜಾರಿ

ಮುಂಬೈ:ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ನಿವಾಸಕ್ಕೆ ಶುಕ್ರವಾರ ಬೆಳಗ್ಗೆ ಜಂಟಿ ಕಮೀಷನರ್ ವಿನಯ್ ಚೌಬೆ ಹಾಗೂ ಪೊಲೀಸ್ ತಂಡ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ ಎಂದು ವರದಿ ತಿಳಿಸಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಎಲ್ಲಾ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಇಡೀ ಪ್ರದೇಶದಲ್ಲಿ ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಅಲ್ಲದೇ ಪೊಲೀಸ್ ತಂಡ ಶ್ವಾನ ದಳದ ಜತೆಗೆ ಎನ್ ಸಿಪಿ ಕಚೇರಿಯಲ್ಲಿಯೂ ಪರಿಶೀಲನೆ ನಡೆಸುತ್ತಿದೆ ಎಂದು ಡಿಸಿಪಿ ಸಂಗ್ರಾಮ್ ಸಿಂಗ್ ನಿಶಾಂದರ್ ತಿಳಿಸಿದ್ದಾರೆ.

ಶರದ್ ಪವಾರ್ ಜಾರಿ ನಿರ್ದೇಶನಾಲಯದ ಕಚೇರಿಗೆ ಶುಕ್ರವಾರ ಭೇಟಿ ನೀಡುವುದಾಗಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿ ಪೊಲೀಸರು ಗುರುವಾರದಿಂದಲೇ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಜಾರಿ ನಿರ್ದೇಶನಾಲಯ ಶರದ್ ಪವಾರ್ ಅವರ ವಿಚಾರಣೆ ನಡೆಸಲಿರುವ ಏತನ್ಮಧ್ಯೆ ಎನ್ ಸಿಪಿ ಮುಖಂಡ ನವಾಬ್ ಮಲಿಕ್ ಕೂಡಾ ಪವಾರ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮಲಿಕ್, ಮುಂಬೈನಾದ್ಯಂತ ಪೊಲೀಸರು ಎನ್ ಸಿಪಿ ಕಾರ್ಯಕರ್ತರನ್ನು ಬಂಧಿಸುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಪವಾರ್ ಶುಕ್ರವಾರ ಮಧ್ಯಾಹ್ನ 2ಗಂಟೆಗೆ ಇ.ಡಿ ಕಚೇರಿಗೆ ಖಂಡಿತವಾಗಿಯೂ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದರು.

No Comments

Leave A Comment