Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 91ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಅದ್ದೂರಿಯ ಚಾಲನೆ.......ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಕುಂಭಾಸಿ; ರಿಕ್ಷಾ ಪಲ್ಟಿ ; ಮಹಿಳೆಗೆ ಗಾಯ, ಮಾನವೀಯತೆ ಮೆರೆದ ಸಚಿವ ರಾಮುಲು

ತೆಕ್ಕಟ್ಟೆ: ಕುಂಭಾಶಿಯಲ್ಲಿ ಅಪಘಾತಕ್ಕೀಡಾದ ಮಹಿಳೆಯನ್ನು ಸ್ವತ ಆರೋಗ್ಯ ಸಚಿವ ಶ್ರೀರಾಮುಲು ಅವರು ತನ್ನ ವಾಹನದಲ್ಲಿ ಕರೆದುಕೊಂಡು ಆಸ್ಪತ್ರೆ ಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಕುಂಭಾಶಿ ರಸ್ತೆಯಲ್ಲಿ ಬೈಕ್ ಸವಾರರೋರ್ವರು ಲಾರಿ ಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದರು. ಇದೇ ಸಮಯದಲ್ಲಿ ಹಿಂದಿನಿಂದ ಬರುತ್ತಿದ್ದ ಆಟೋ ರಿಕ್ಷಾ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಪಲ್ಟಿಯಾಯಿತು.

ಕುಂದಾಪುರ ಕಡೆಗೆ ಕಾರ್ಯಕ್ರಮಕ್ಕೆಂದು ಆಗಮಿಸುತ್ತಿದ್ದ ಅರೋಗ್ಯ ಸಚಿವ ಬಿ ಶ್ರೀರಾಮುಲು ಅವರು ಮಹಿಳೆಯನ್ನು ಕಂಡು ತಮ್ಮ ಕಾರಿನಲ್ಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಸಚಿವರ ಈ ನಡೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

ಸಚಿವರು ಉಡುಪಿಯಿಂದ ಕುಂದಾಪುರ ಕಡೆಗೆ ಪ್ರಯಾಣ ಮಾಡುತ್ತಿದ್ದರು.

 

 

 

No Comments

Leave A Comment