Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 91ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಅದ್ದೂರಿಯ ಚಾಲನೆ.......ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಬಳ್ಳಾರಿ ಜಿಲ್ಲೆ ವಿಭಜಿಸಿದರೆ ರಾಜೀನಾಮೆ: ಶಾಸಕ ಸೋಮಶೇಖರ ರೆಡ್ಡಿ

ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ಪ್ರತ್ಯೇಕಿಸಿ  ವಿಜಯನಗರ ಜಿಲ್ಲೆಯನ್ನಾಗಿಸುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕ್ರಮಕ್ಕೆ ಆಡಳಿತರೂಢ ಪಕ್ಷದ ಶಾಸಕರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲೆ ವಿಭಜಿಸಿದರೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯನ್ನು ಪ್ರತಿನಿಧಿಸುವ ನಾಲ್ಕು ಬಿಜೆಪಿ ಶಾಸಕರಿದ್ದು, ಯಾರಿಗೂ ಜಿಲ್ಲೆ ವಿಭಜಿಸುವ ಸರ್ಕಾರದ ಕ್ರಮಕ್ಕೆ ಒಪ್ಪಿಗೆ ಇಲ್ಲ. ಅನರ್ಹ ಶಾಸಕ ಆನಂದ್ ಸಿಂಗ್ ಅವರ ಮನವಿಗೆ ಯಡಿಯೂರಪ್ಪ ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳಬಾರದು ಎಂದರು.

ಆನಂದ್ ಸಿಂಗ್ ಜಿಂದಾಲ್ ವಿಚಾರಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಳ್ಳಾರಿ ಜಿಲ್ಲೆಯ ವಿಭಜನೆ ಬಗ್ಗೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಮಾತನಾಡಿರಲಿಲ್ಲ. ಅದರೀಗ ಸರ್ಕಾರ 5 ತಾಲೂಕುಗಳನ್ನು ವಿಭಾಗಿಸಿ ವಿಜಯನಗರ ಜಿಲ್ಲೆ ರಚನೆಗೆ ತರಾತುರಿಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಬಾರದು. ಸಂಪುಟದ ಮುಂದೆ ಜಿಲ್ಲಾ ವಿಭಜನೆಯ ಪ್ರಸ್ತಾಪ ಮಾಡಬಾರದು ಎಂದು ಆಗ್ರಹಿಸಿದರು.

No Comments

Leave A Comment