Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮು೦ಬರುವ ಮಾಗ ಮಾಸದಲ್ಲಿ ಭಜನಾ ಸಪ್ತಾಹ ಕಾರ್ಯಕ್ರಮವು ಜರಗಲಿದೆ.....ವರ್ಷ೦ಪ್ರತಿ ನವರಾತ್ರೆಯ೦ದು ನಡೆಯಲಿರುವ ಶ್ರೀಶಾರದಾ ಪೂಜಾ ಕಾರ್ಯಕ್ರಮವು ವಿಜೃ೦ಭಣೆಯಲ್ಲಿ ಜರಗಲಿದೆ....

ಲಾರಿಗೆ ಸರ್ಕಾರಿ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ಚಾಲಕ ಸೇರಿ ಮೂವರ ದುರ್ಮರಣ

ಬೆಂಗಳೂರು: ಲಾರಿಗೆ ಸಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇತರ 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಕರ್ನಾಟಕ-ತಮಿಳುನಾಡು ಗಡಿ ಭಾಗ ಅತ್ತಿಬೆಲೆಯ ಸುಳಗಿರಿ ಎಂಬಲ್ಲಿ ಬೆಳಗ್ಗಿನ ಜಾವ ನಡೆದಿದೆ.

ಬಸ್ ಚಾಲಕ ವೇಡಿಯಪ್ಪನ್(46), ನಿರ್ವಾಹಕ ಸುಧಾಕರ್(40) ಹಾಗೂ ಬಸ್ಸಿನ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, 30ಕ್ಕೂ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಅಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಕೃಷ್ಣಗಿರಿಗೆ ಹೊರಟಿದ್ದ ತಮಿಳುನಾಡು ಸಾರಿಗೆ ಬಸ್ ಸುಳಗಿರಿ ಬಳಿ ಬೇರೆ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ರಭಸದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂದಿನ ಭಾಗದಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ವಿಷಯ ತಿಳಿದ ತಕ್ಷಣ ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೃತದೇಹಗಳು ಬಸ್ಸಿನೊಳಗೆ ಸಿಲುಕಿಕೊಂಡಿತ್ತು. ಸಾರ್ವಜನಿಕರು ಮತ್ತು ಪೊಲೀಸರು ಮೃತದೇಹಗಳನ್ನು ಹೊರತೆ ತೆಗೆಯಲು ಹರಸಾಹಸ ಪಟ್ಟರು. ಬಳಿಕ ಅವುಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಸುಳಗಿರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

No Comments

Leave A Comment