Log In
BREAKING NEWS >
ಜುಲೈ 15 ರಂದು ಸಿ.ಬಿ.ಎಸ್.ಸಿ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ...

ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 14ಕ್ಕೆ ಮುಂದೂಡಿಕೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಅಕ್ಟೋಬರ್ 14ಕ್ಕೆ ಮುಂದೂಡಿದೆ.

ಡಿಕೆ ಶಿವಕುಮಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಅಕ್ಟೋಬರ್ 14ಕ್ಕೆ ಮುಂದೂಡಿದೆ. ಇದರಿಂದಾಗಿ ಡಿಕೆ ಶಿವಕುಮಾರ್ ಇನ್ನೂ 14 ದಿನಗಳ ಕಾಲ ತಿಹಾರ್ ಜೈಲಿನಲ್ಲಿಯೇ ಕಳೆಯುವಂತಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್, ಅಕ್ಟೋಬರ್ 14 ರೊಳಗೆ ಆಕ್ಷೇಪಣೆ ಇದ್ದರೆ ಸಲ್ಲಿಸುವಂತೆ ಸೂಚಿಸಿದ್ದಾರೆ.

No Comments

Leave A Comment