ಪರ್ಯಾಯ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ
ಉಡುಪಿ:ಭಾವಿ ಪರ್ಯಾಯ ಶ್ರೀ ಅದಮಾರು ಮಠದ ಪರ್ಯಾಯ ಮಹೋತ್ಸವವನ್ನು ವೈಶಿಷ್ಟ್ಯ ಪೂರ್ಣ ಹಾಗೂ ಪರಿಸರ ಪೂರಕವಾಗಿ ನಡೆಸುವ ಸಲುವಾಗಿ ಪೂರ್ವಭಾವಿ ಸಮಾಲೋಚನಾ ಸಭೆಯು ದಿನಾಂಕ 05.10.2019 ಶನಿವಾರ ಸಾಯಂಕಾಲ 4.30 ಗಂಟೆಗೆ ಉಡುಪಿಯ ಪೂರ್ಣಪ್ರಜ್ಞಾ ಆಡಿಟೋರಿಯಂನ ಮಿನಿ ಹಾಲಿನಲ್ಲಿ ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಸಾನ್ನಿಧ್ಯದಲ್ಲಿ ನಡೆಯಲಿದೆ.
ಈ ಸಭೆಗೆ ಮಠದ ಶಿಷ್ಯರು,ಅಭಿಮಾನಿಗಳು,ಭಕ್ತಾಭಿಮಾನಿಗಳು ಆಗಮಿಸಿ ತಮ್ಮ ಸೂಕ್ತ ಸಲಹೆ ಸೂಚನೆಯನ್ನು ನೀಡಿ ಪರ್ಯಾಯೋತ್ಸವ ಯಶಸ್ವಿಯಾಗುವಲ್ಲಿ ಸಹಕರಿಸಬೇಕೆಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.