Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ದೆಹಲಿಗೆ ಅತ್ಮಾಹುತಿ ಬಾಂಬರ್‌ಗಳು ನುಸುಳಿರುವ ಶಂಕೆ: ರೆಡ್ ಅಲರ್ಟ್, ಇಬ್ಬರ ಬಂಧನ!

ನವದೆಹಲಿ: ಭಾರತದಲ್ಲಿ ವಿದ್ವಂಸಕ ಕೃತ್ಯ ನಡೆಸಲು ಹವಣಿಸುತ್ತಿರುವ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಅತ್ಮಾಹುತಿ ಬಾಂಬರ್‌ಗಳು ರಾಷ್ಟ್ರ ರಾಜಧಾನಿ ದೆಹಲಿಗೆ ನುಗ್ಗಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.

‘ಎ’ ವರ್ಗದ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸದ್ಯ ಹೈ ಅಲರ್ಟ್ ಆಗಿದ್ದು ನಗರದೆಲ್ಲೆಡೆ ಹದ್ದಿನ ಕಣ್ಣು ಇರಿಸಿದ್ದಾರೆ. ಇನ್ನು ಅದಾಗಲೇ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ದೆಹಲಿಗೆ ಪ್ರವೇಶಿಸಿರುವ ಉಗ್ರರು ಪಾಕಿಸ್ತಾನ ಮೂಲದ ಜೈಷ್ ಇ ಮೊಹಮ್ಮದ್ ಸಂಘಟನೆ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಪ್ತಚರ ಮಾಹಿತಿ ಅನುಸರಿಸಿ ದಿಲ್ಲಿ ಪೊಲೀಸರ ವಿಶೇಷ ತಂಡ ಬುಧವಾರ ರಾತ್ರಿ ನಗರದ 9 ಸ್ಥಳಗಳಲ್ಲಿ ದಾಳಿ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕಿತ್ತು ಹಾಕಿದ ನಂತರ ಭಾರತದಲ್ಲಿ ವಿದ್ವಂಸಕ ಕೃತ್ಯ ನಡೆಸಿ ಪ್ರತೀಕಾರ ತೀರಿಸಿಕೊಳ್ಳುವ ಸಂಚು ರೂಪಿಸಿದ್ದಾರೆ. ಹೀಗಾಗಿ 4-5 ಅತ್ಮಾಹುತಿ ಬಾಂಬರ್ ಗಳು ಪೈಕ್ ಇಬ್ಬರು ವಿದೇಶಿಯರು ಎಂದು ಹೇಳಲಾಗುತ್ತಿದೆ.

No Comments

Leave A Comment