Log In
BREAKING NEWS >
ಜುಲೈ 15 ರಂದು ಸಿ.ಬಿ.ಎಸ್.ಸಿ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ...

ಕಾಶ್ಮೀರದಲ್ಲಿ ಉಗ್ರರ ಅಡಗು ತಾಣಗಳು ಪತ್ತೆ: 17 ಗ್ರೆನೇಡ್ ವಶಕ್ಕೆ ಪಡೆದ ಸೇನೆ

ಜಮ್ಮು: 370 ವಿಧಿ ರದ್ದತಿ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ವಿಧ್ವಂಸಕ ಕೃತ್ಯವೆಸಗಲು ನಾನಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದು, ಈ ಯತ್ನಗಳನ್ನು ಭಾರತೀಯ ಸೇನೆ ವಿಫಲಗೊಳ್ಳುವಂತೆ ಮಾಡುತ್ತಿದೆ.

ಜಮ್ಮು ಮತ್ತು ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿ ಪ್ರದೇಶದಲ್ಲಿರುವ ಉಗ್ರರ ಅಡಗುತಾಣಗಳು ಪತ್ತೆಯಾಗಿದ್ದು, 17 ಗ್ರೆನೇಡ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪೂಂಚ್ ಜಿಲ್ಲೆಯ ಲೋರನ್ ಗಡಿ ಪಟ್ಟಿಯ ಖಾರಗಲಿ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಉಗ್ರರ ಅಡಗುತಾಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

No Comments

Leave A Comment