Log In
BREAKING NEWS >
ಅರ್ಧಕ್ಕೆ ನಿಂತ ಪರ್ಕಳ ರಾ. ಹೆದ್ದಾರಿ ಕಾಮಗಾರಿ: ಅಂಗಡಿ, ಮನೆಯೊಳಗೆ ಕೆಸರು ನೀರು....

ಚಳ್ಳಕೆರೆ: ಸಾಣೇಕೆರೆ ಬಳಿ ಅಪಘಾತ, ಬಸ್-ಟ್ರಕ್ ಡಿಕ್ಕಿ, ಮೂವರ ದುರ್ಮರಣ

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಸಾಣೇಕೆರೆ ಬಳಿ ಇಂದು ಬೆಳಗ್ಗೆ ವಾಯುವ್ಯ ಸಾರಿಗೆ ಸಂಸ್ಥೆ ಬಸ್, ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲಿಯೇ ದುರ್ಮರಣ ಹೊಂದಿದ್ದಾರೆ.

ಮೃತರನ್ನು ಬಸ್ ಚಾಲಕ ಪವನ್ ಹಾಗೂ ಪ್ರಯಾಣಿಕರಾದ ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ತೆರಳುತ್ತಿದ್ದ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಚಳ್ಳಕೆರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಅವಶೇಷಗಳನ್ನು ತೆರವುಗೊಳಿಸುವ ಮೂಲಕ ಬೀದರ್ – ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ಚಳ್ಳಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಸಂಬಂಧ ತನಿಖೆಯನ್ನು ಕೈಗೊಂಡಿದ್ದಾರೆ.

No Comments

Leave A Comment