Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ಭರ್ಜರಿ ಬೇಟೆ: 89 ತಾಲಿಬಾನ್ ಉಗ್ರರನ್ನು ಹತ್ಯೆಗೈದ ಯೋಧರು!

ತಹಾರ್(ಅಫ್ಗಾನಿಸ್ತಾನ್): ತಾಲಿಬಾನ್ ಉಗ್ರರ ವಿರುದ್ಧ ನಡೆದ 24 ಗಂಟೆಗಳ ನಿರಂತರ ಕಾರ್ಯಾಚರಣೆಯಲ್ಲಿ ಬರೋಬ್ಬರಿ 89 ತಾಲಿಬಾನ್ ಉಗ್ರರನ್ನು ಯೋಧರು ಹೊಡೆದುರುಳಿಸಿದ್ದಾರೆ.

ಅಫ್ಗಾನಿಸ್ತಾನದ ತಹಾರ್ ನಲ್ಲಿ ಆಫ್ಗಾನ್ ಯೋಧರು ತಾಲಿಬಾನ್ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದರು. 24 ಗಂಟೆ ನಿರಂತರ ಕಾರ್ಯಾಚರಣೆಯಲ್ಲಿ 89 ಉಗ್ರರನ್ನು ಹತ್ಯೆ ಮಾಡಲಾಗಿದ್ದು ಇದೇ ವೇಳೆ 60ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ತಾಲಿಬಾನ್ ಉಗ್ರ ಸಂಘಟನೆ ವಿರುದ್ಧ ಆಫ್ಗಾನ್ ಸೇನೆ ಕಾರ್ಯಾಚರಣೆ ನಡೆಸುತ್ತಿದ್ದು ನಿನ್ನೆ ನಡೆದ ಕಾರ್ಯಾಚರಣೆ ವೇಳೆ 89 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ರಕ್ಷಣಾ ಇಲಾಖೆಯ ವಕ್ತಾರ ರೊಹುಲ್ಲಾ ಅಹ್ಮದ್ ಝೈ ಹೇಳಿದ್ದಾರೆ.

No Comments

Leave A Comment