Log In
BREAKING NEWS >
ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾ. ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ...

ಚಿಕ್ಕಮಗಳೂರು: ಆಟೋ ಮೇಲೆ ಬಿದ್ದ ತೆಂಗಿನ ಮರ, ಕೂದಲೆಳೆ ಅಂತರದಲ್ಲಿ ಚಾಲಕ ಪಾರು

ಚಿಕ್ಕಮಗಳೂರು: ನಗರದಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಆಟೋ ಮೇಲೆ ತೆಂಗಿನ ಮರವೊಂದು ಬಿದ್ದ ಪರಿಣಾಮ, ಕೂದಲೆಳೆ ಅಂತರದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕಾಳಿದಾಸ ನಗರದ ಹಲವು ಮನೆಗಳಿಗೆ ಚರಂಡಿ ನೀರು ನುಗ್ಗಿದ ಪರಿಣಾಮ ಅಲ್ಲಿನ ನಿವಾಸಿಗಳೆಲ್ಲ ರಾತ್ರಿಯಿಡೀ ನಿದ್ದೆ ಮಾಡದೇ ನೀರು ಹೊರಹಾಕಿದ್ದಾರೆ. ಅವೈಜ್ಞಾನಿಕ ಚರಂಡಿ ನಿರ್ಮಿಸಿರುವುದರಿಂದ ನಗರ ಸಭೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲೆನಾಡು ಭಾಗದ ವಿವಿದೆಡೆ ಭಾರೀ ಮಳೆ ಹಾನಿ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು.ಜನ್ನಾಪುರದಲ್ಲಿ ಆಟೋ ಮೇಲೆ ಬಿದ್ದ ತೆಂಗಿನ ಮರ.ಬಿದ್ದಿದೆ. ಆ ವೇಳೆ ಆಟೋದಲ್ಲಿ ಯಾರೂ ಇರದ ಕಾರಣ ಅನಾಹುತ ತಪ್ಪಿದೆ. ಘಟನೆಯಲ್ಲಿ ಆಟೋ ಸಂಪೂರ್ಣ ಜಖಂ ಆಗಿದೆ.

ಶನಿವಾರ ಜಿಲ್ಲೆಯ ಮೂಡಿಗೆರೆ, ಎನ್.ಆರ್. ಪುರ, ಕೊಪ್ಪ, ಶೃಂಗೇರಿಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಮೂಡಿಗೆರೆಯಲ್ಲಿ ಸೇತುವೆಯೊಂದು ಕೊಚ್ಚಿ ಹೋಗಿದೆ.

No Comments

Leave A Comment