Log In
BREAKING NEWS >
2019ರ ವಿಶ್ವ ಸುಂದರಿ ಪ್ರಕಟ: ಭಾರತದ ಸುಮನ್ ರಾವ್ ದ್ವಿತೀಯ ರನ್ನರ್ ಅಪ್....ಫಾಸ್ಟ್ ಟ್ಯಾಗ್ ಕಡ್ಡಾಯ: ಲಾಸ್ಟ್ ಸ್ಟಾಪ್ ಬದಲಾಯಿಸಿದ ಖಾಸಗಿ ಬಸ್ ಗಳು...

ಪಶ್ಚಿಮಬಂಗಾಳ; RSS ಕಾರ್ಯಕರ್ತ, ಗರ್ಭಿಣಿ ಪತ್ನಿ, ಮಗು ಸೇರಿ ಮೂವರ ಹತ್ಯೆ

ಕೋಲ್ಕತಾ: 35 ವರ್ಷದ ಶಾಲಾ ಶಿಕ್ಷಕ, ಆರ್ ಎಸ್ ಎಸ್ ಕಾರ್ಯಕರ್ತ ಬಂಧು ಪ್ರಕಾಶ್ ಪಾಲ್, 8ತಿಂಗಳ ಗರ್ಭಿಣಿ ಪತ್ನಿ ಹಾಗೂ ಆರು ವರ್ಷದ ಮಗನನ್ನು ಹತ್ಯೆಗೈದಿರುವ ಘಟನೆ ಪಶ್ಚಿಮಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಪ್ರಕಾಶ್ ಪಾಲ್ (35ವರ್ಷ), ಬ್ಯೂಟಿ ಪಾಲ್ (28 ವರ್ಷ) ಹಾಗೂ ಪುತ್ರ ಅನ್ಗಾನ್ ಪಾಲ್ (6ವರ್ಷ) ಶವ ಮಂಗಳವಾರ ಮಧ್ಯಾಹ್ನ ಪತ್ತೆಯಾಗಿದ್ದು, ಮೂವರ ದೇಹದ ಮೇಲೆ ಗಾಯದ ಗುರುತುಗಳಿವೆ. ಮಗುವಿನ ಕುತ್ತಿಗೆಯನ್ನು ಟವೆಲ್ ನಿಂದ ಬಿಗಿದು ಉಸಿರುಗಟ್ಟಿಸಿ ಸಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಬಿಜೆಪಿ ಉಪಾಧ್ಯಕ್ಷ ಹುಮಾಯೂನ್ ಹಾಗೂ ಪೊಲೀಸ್ ಅಧಿಕಾರಿಗಳು, ಹತ್ಯೆ ಘಟನೆಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಪಾಲ್ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆರ್ ಎಸ್ ಎಸ್ ಕಾರ್ಯಕರ್ತ ಕೂಡಾ ಆಗಿದ್ದರು. ಆದರೆ ಕೊಲೆ ಹಿಂದೆ ರಾಜಕೀಯ ಕಾರಣ ಇಲ್ಲ ಎಂದು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಈವರೆಗೂ ಯಾರನ್ನೂ ಬಂಧಿಸಿಲ್ಲ. ಹಲವು ಆಯಾಮಗಳಲ್ಲಿ ಕೊಲೆ ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಇವರೇ ಚೂರಿಯಿಂದ ಇರಿದುಕೊಂಡು ಸಾವನ್ನಪ್ಪಿರಬೇಕೆಂದು ಶಂಕಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ. ಮತ್ತೊಂದೆಡೆ ಈ ಕೊಲೆ ಪ್ರಕರಣ ಪಶ್ಚಿಮಬಂಗಾಳದಲ್ಲಿ ರಾಜಕೀಯ ತಿರುವು ಪಡೆದುಕೊಂಡಿದೆ ಎಂದು ವರದಿ ವಿವರಿಸಿದೆ.

No Comments

Leave A Comment