Log In
BREAKING NEWS >
ಉಡುಪಿ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ಗ್ರಾಮೀಣ ಉತ್ಪನ್ನಗಳ ಮೇಳಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ....ಪರ್ಯಾಯ ಪ೦ಚಶತಮಾನೋತ್ಸವಕ್ಕೆ ಅದ್ದೂರಿಯ ಚಾಲನೆ-ಗಣ್ಯರಿಗೆ ಸನ್ಮಾನ..ದಿನಕ್ಕೊ೦ದು ಭಾಗವತಾಮೃತ ಬಿ೦ದುಗಳು-ರಾಮಸ೦ದೇಶ ಪ್ರಸ್ತಕ ಅನಾವರಣ... ಜ 18ಕ್ಕೆ ಮುಖ್ಯಮ೦ತ್ರಿಗಳಿ೦ದ "ವಿಶ್ವಪಥ" ನೂತನ ದರ್ಶನ ದಾರಿಯ ಉದ್ಘಾಟನೆ

ಅನೌಪಚಾರಿಕ ಶೃಂಗ ಸಭೆ: ಪಂಚೆಯಲ್ಲಿ ಚೀನಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ, ಕ್ಸಿಗೆ ಮೋದಿ ಗೈಡ್

ಚೆನ್ನೈ: ಎರಡು ದಿನ ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಶುಕ್ರವಾರ ಸಂಜೆ ಮಹಾಬಲಿಪುರಂಗೆ ಆಗಮಿಸಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅದ್ಧೂರಿ ಸ್ವಾಗತ ನೀಡಿದರು.

ಇಂದು ಮಧ್ಯಾಹ್ನ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಚೀನಾ ಅಧ್ಯಕ್ಷರಿಗೆ ಸಾಂಪ್ರದಾಯಿಕ ನೃತ್ಯದ ಮೂಲಕ ತಮಿಳುನಾಡು ಸರ್ಕಾರ ಅಭುತಪೂರ್ವ ಸ್ವಾಗತ ಕೋರಿತ್ತು. ವಿಮಾನ ನಿಲ್ದಾಣದಿಂದ ನೇರವಾಗಿ ಖಾಸಗಿ ಹೋಟೆಲ್ ಗೆ ತೆರಳಿದ ಕ್ಸಿ ಜಿನ್ ಪಿಂಗ್ ಅವರು 4 ಗಂಟೆಗೆ ರಸ್ತೆ ಮೂಲಕ ಮಹಾಬಲಿಪುರಂಗೆ ಆಗಮಿಸಿದರು. ಮಹಾಬಲಿಪುರಂನಲ್ಲಿ ಚೀನಾ ಅಧ್ಯಕ್ಷರ ಆಗಮನಕ್ಕಾಗಿ ಕಾಯುತ್ತಿದ್ದ ಪ್ರಧಾನಿ ಮೋದಿ ಅವರು, ದಕ್ಷಿಣ ಭಾರತದ ಸಾಂಪ್ರದಾಯಿಕ ಧಿರಿಸು ಪಂಚೆ ಧರಿಸಿ ಕ್ಸಿ ಜಿನ್ ಪಿಂಗ್ ಅವರನ್ನು ಬರಮಾಡಿಕೊಂಡರು. ಅಲ್ಲದೆ ಐತಿಹಾಸಿಕ ತಾಣ ಮಹಾಬಲಿಪುರಂ ಕುರಿತು ಚೀನಾ ಅಧ್ಯಕ್ಷರಿಗೆ ಸ್ವತಃ ಗೈಡ್ ಮಾಡಿದರು.

ಉಭಯ ನಾಯಕರು ಅಲ್ಲಿನ ಸ್ಮಾರಕಗಳನ್ನು ವೀಕ್ಷಿಸಿದರು. ಮಹಾಬಲಿಪುರಂನ ದೇಗುಲಕ್ಕೂ ಮೋದಿ, ಕ್ಸಿ ಜಿನ್‌ಪಿಂಗ್‌ ಭೇಟಿ ನೀಡಿದರು.

ತಮಿಳುನಾಡಿನ ಮಹಾಬಲಿಪುರಂನಲ್ಲಿ ಚೀನಾ ಪ್ರಧಾನಿ ಜೊತೆಗೆ ಮೋದಿ ಬಿಳಿ ಪಂಚೆ ಹಾಗೂ ಬಿಳಿ ಅಂಗಿ ಜೊತೆಗೆ ಹೆಗಲಿಗೊಂದು ಶಾಲು ಹಾಕಿಕೊಂಡು ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಪ್ರಧಾನಿ ಮೋದಿಯವರ ದಕ್ಷಿಣದ ವಸ್ತ್ರ ಶೈಲಿ ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಸದ್ದು ಮಾಡುತ್ತಿದೆ.

ಭಾರತ – ಚೀನಾ ಮುಖ್ಯಸ್ಥರ ನಡುವೆ ಮತ್ತೊಂದು ಅನೌಪಚಾರಿಕ ಸಭೆ ಇಂದು ಸಂಜೆ ಮಹಾಬಲಿಪುರಂನಲ್ಲಿ ನಡೆಯುಲಿದೆ. ಕಳೆದ ವರ್ಷ ಏಪ್ರಿಲ್ ನಲ್ಲಿ ಭಾರತ ಮತ್ತು ಚೀನಾ ನಡುವಿನ ವ್ಯಾಪರ ವಹಿವಾಟನ್ನು ಸುಧಾರಿಸುವ ಹಾಗೂ ಎರಡೂ ರಾಷ್ಟ್ರಗಳ ಅಂತಾರಾಷ್ಟ್ರೀಯ ಮತ್ತು ಪ್ರಾದೇಶಿಕ ಹಿತಾಸಕ್ತಿಯನ್ನು ಕಾಯ್ದುಕೊಳ್ಳುವ ಸಲುವಾಗಿ ಚೀನಾದ ವುಹಾನ್ ಎಂಬಲ್ಲಿ ಉಭಯ ನಾಯಕರು ಮೊದಲ ಬಾರಿಗೆ ಅನೌಪಚಾರಿಕ ಶೃಂಗಸಭೆ ನಡೆಸಿದ್ದರು. ಈ ವೇಳೆ ಅನೇಕ ಪ್ರಮುಖ ವಿಚಾರಗಳ ಕುರಿತು ಚರ್ಚೆ ಮಾಡಿದ್ದರು.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಪ್ರಧಾನಿ ಮೋದಿ ಹಾಗೂ ಕ್ಸಿ ಜಿನ್​ಪಿಂಗ್ ಮೊದಲ ಬಾರಿಗೆ ಭೇಟಿಯಾಗುತ್ತಿದ್ದು, ಈ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಜಾಗತಿಕ ನಾಯಕರಾಗಲು ಪೈಪೋಟಿ ನಡೆಸುತ್ತಿರುವ ಪ್ರಧಾನಿ ಮೋದಿ ಹಾಗೂ ಕ್ಸಿ ಜಿನ್’ಪಿಂಗ್ ಉಭಯ ದೇಶಗಳ ನಡುವೆ ಇರುವ ಹಲವು ವಿವಾದಗಳಿಂದ ಜಾಗತಿಕ ವೇದಿಕೆಯಲ್ಲಿ ಅಖಂಡ ವೈರಿಗಳೆಂದೇ ಪರಿಗಣಿಸಲ್ಪಡುತ್ತಾರೆ. ಆದರೆ, ಅನೌಪಚಾರಿಕ ಭೇಟಿಯ ವಿಚಾರಕ್ಕೆ ಬಂದಾಗ ಇಬ್ಬರೂ ಇನ್ನಿಲ್ಲದ ಸ್ನೇಹಿತರಂತೆ ಬಿಂಬಿಸಿಕೊಳ್ಳುತ್ತಾ ಬಂದಿದ್ದಾರೆ.

No Comments

Leave A Comment