Log In
BREAKING NEWS >
ಕೊರೋನಾ ಲಾಕ್'ಡೌನ್ ಎಫೆಕ್ಟ್: ಏಪ್ರಿಲ್ 30ರವರೆಗೂ ಬುಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ....

2ನೇ ಟೆಸ್ಟ್: ಆಫ್ರಿಕನ್‌ರನ್ನು ಮಣಿಸಿ ಗೆಲುವಿನ ನಗೆ ಬೀರಿದ ಟೀಂ ಇಂಡಿಯಾ

ಪುಣೆ: ಟೀಂ ಇಂಡಿಯಾ ವೇಗಿಗಳ ಮಾರಕ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾ ಬ್ಯಾಟ್ಸ್ ಮನ್ ಗಳ ತತ್ತರಿಸಿದ್ದು ಎರಡನೇ ಟೆಸ್ಟ್ ಪಂದ್ಯದಲ್ಲೂ ಭಾರತ ಗೆಲುವಿನ ನಗೆ ಬೀರಿದೆ.

ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 137 ರನ್ ಗಳಿಂದ ಗೆಲುವಿನ ನಗೆ ಬೀರಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 601 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ನಂತರ ಆಫ್ರಿಕಾ ಮೊದಲ ಇನ್ನಿಂಗ್ಸ್ ನಲ್ಲಿ 275 ರನ್ ಗಳಿಗೆ ಆಲೌಟ್ ಆಗಿ ಫಾಲೋ ಆನ್ ಗೆ ಸಿಲುಕಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಫ್ರಿಕಾ 189 ರನ್ ಗಳಿಗೆ ಆಲೌಟ್ ಆಗಿ ಭಾರತಕ್ಕೆ ಶರಣಾಗಿದೆ.

No Comments

Leave A Comment