Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಓರ್ವ ಸಾವು, ಐವರಿಗೆ ಗಂಭೀರ ಗಾಯ

ಮುಂಬೈ: ದಕ್ಷಿಣ ಮುಂಬೈನ ಕಟ್ಟಡವೊಂದರಲ್ಲಿ ಆಕಸ್ಮಿಕ ಬೆಂಕಿ  ಅವಘಡವಾದ ಕಾರಣ ಓರ್ವ ಸಾವನ್ನಪ್ಪಿ, ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಐವರು ಗಾಯಗೊಂಡಿದ್ದಾರೆ.

ಪದ್ಮಸಿ ರಸ್ತೆಯಲ್ಲಿರುವ ಆದಿತ್ಯಾ ಆರ್ಕೆಡ್ ಕಟ್ಟಡದಲ್ಲಿ ಮುಂಜಾನೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, 9 ಗಂಟೆಯ ಹೊತ್ತಿಗೆ ನಾಲ್ಕನೇ ಅಂತಸ್ತಿಗೂ ವ್ಯಾಪಿಸಿದೆ. ಪರಿಣಾಮವಾಗಿ ಕಟ್ಟದಲ್ಲಿರುವ ಜನರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಬಂದ ಅಗ್ನಿಶಾಮಕ ಸಿಬ್ಬಂದಿಗಳು ಕೂಡ  ಉಸಿರಾಟದ ಸಮಸ್ಯೆಗೆ ತುತ್ತಾಗಿದ್ದಾರೆ. ಈ ವೇಳೆ ಓರ್ವ ಸಾವನ್ನಪ್ಪಿದ್ದರೆ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಟ್ಟವಾದ ಹೊಗೆ ರಕ್ಷಣಾ ಕಾರ್ಯಕ್ಕೆ ತೊಡಕುಂಟುಮಾಡುತ್ತಿರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

 

No Comments

Leave A Comment