Log In
BREAKING NEWS >
ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ 91ನೇ ಭಜನಾ ಸಪ್ತಾಹ ಮಹೋತ್ಸವದ ನೇರಪ್ರಸಾರ ಕಾರ್ಯಕ್ರಮಕ್ಕೆ ಸಹಕರಿಸಿದ ದೇವಸ್ಥಾನದ ಆಡಳಿತ ಮ೦ಡಳಿಗೆ ಹಾಗೂ ಭಜನಾ ಸಪ್ತಾಹ ಮಹೋತ್ಸವದ ಸಮಿತಿಯವರಿಗೆ ಮತ್ತು ಜಾಹೀರಾತನ್ನು ನೀಡಿ ಸಹರಿಸಿದ ಎಲ್ಲಾ ಜಾಹೀರಾತುದಾರರಿಗೆ ಕರಾವಳಿ ಕಿರಣ ಡಾಟ್ ಬಳಗದ ವತಿಯಿ೦ದ ಧನ್ಯವಾದಗಳು ಹಾಗೂ ಏಳುದಿನಗಳ ನಮ್ಮ ಅ೦ತರ್ಜಾಲ ಪತ್ರಿಕೆಯನ್ನು ವೀಕ್ಷಿಸಿದ ಎಲ್ಲಾ ಓದುಗರಿಗೆ,ಅಭಿಮಾನಿಗಳಿಗೆ ಅಭಿನ೦ದನೆಗಳನ್ನು ಸಲ್ಲಿಸುತ್ತೇವೆ.

ಸಿಂಘ್ವಿ ಗೈರು; ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಮಂಗಳವಾರಕ್ಕೆ ಮುಂದೂಡಿಕೆ

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರಕ್ಕೆ ಮುಂದೂಡಿದೆ.

ಡಿಕೆ ಶಿವಕುಮಾರ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಕೋರ್ಟ್ ಗೆ ಹಾಜರಾಗದಿದ್ದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನಾಳೆಗೆ ಮುಂದೂಡುವಂತೆ ಕಿರಿಯ ವಕೀಲರು ಮನವಿ ಮಾಡಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಪೀಠ ನಾಳೆ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಗುರುವಾರ, ಶುಕ್ರವಾರ ಜಾರಿ ನಿರ್ದೇಶನಾಲಯದ ಪರ ವಕೀಲರು ವಾದ ಮಂಡಿಸಲಿದ್ದಾರೆ. ಇಂದು ಇ.ಡಿ. ಅಧಿಕಾರಿಗಳು ಕೋರ್ಟ್ ಗೆ ತನಿಖಾ ವರದಿಯನ್ನು ಸಲ್ಲಿಸಿದರು.

ಕೋರ್ಟ್ ನಲ್ಲಿ ಮಂಗಳವಾರ ಡಿಕೆ ಶಿವಕುಮಾರ್ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಲಿದ್ದಾರೆ ಎಂದು ವರದಿ ತಿಳಿಸಿದೆ.

No Comments

Leave A Comment