Log In
BREAKING NEWS >
ಉಡುಪಿಯ ಕಲ್ಸoಕದಲ್ಲಿನ ರಾಯಲ್ ಗಾರ್ಡನಲ್ಲಿ ಡಿ 3 ರಿ೦ದ ಉಡುಪಿ ಉತ್ಸವ ಆರ೦ಭಗೊಳ್ಳಲಿದೆ......ನವೆ೦ಬರ್ 26ರ೦ದು ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಸಿಲಿಂಡರ್ ಸ್ಫೋಟಕ್ಕೆ 2 ಅಂತಸ್ತಿನ ಮನೆ ಕುಸಿದು ಬಿದ್ದು ಹತ್ತು ಮಂದಿ ಸಾವು, ಹಲವರಿಗೆ ಗಾಯ

ಲಕ್ನೋ: ಸಿಲಿಂಡರ್ ಸ್ಫೋಟಗೊಂಡು ಮನೆ ಕುಸಿದು ಬಿದ್ದ ಪರಿಣಾಮ ಹತ್ತು ಮಂದಿ ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶ ಮೌ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಮೌ ಜಿಲ್ಲೆಯ ಮೊಹಮ್ಮದಾಬಾದ್ ಪ್ರದೇಶದಲ್ಲಿನ ಎರಡು ಅಂತಸ್ತಿನ ಮನೆಯೊಳಗೆ ಸಿಲಿಂಡರ್ ಸ್ಫೋಟಗೊಂಡ ರಭಸಕ್ಕೆ ಮನೆ ಕುಸಿದು ಬಿದ್ದಿದ್ದು, ಹಲವರು ಅವಶೇಷಗಳಡಿ ಸಿಲುಕಿಕೊಂಡಿರುವ ಸಾಧ್ಯತೆ ಇದ್ದಿರುವುದಾಗಿ ಸ್ಥಳೀಯ ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.

ಭಾರೀ ದೊಡ್ಡ ಶಬ್ದ ಕೇಳಿ ಗಾಬರಿಗೊಳಗಾಗಿರುವುದಾಗಿ ಸ್ಥಳೀಯ ಜನರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಅವಶೇಷಗಳಡಿ ಸಿಲುಕಿದ್ದಾರೆಯೇ ಎಂದು ಪರಿಶೀಲಿಸಲಾಗುತ್ತಿದೆ ಎಂದು ವರದಿ ವಿವರಿಸಿದೆ. ಘಟನಾ ಸ್ಥಳದಲ್ಲಿ ಆ್ಯಂಬುಲೆನ್ಸ್ ಹಾಗೂ ಭಾರೀ ಜನಸ್ತೋಮ ನೆರೆದಿರುವುದಾಗಿ ವರದಿ ತಿಳಿಸಿದೆ.

No Comments

Leave A Comment