Log In
BREAKING NEWS >
ದಾವಣಗೆರೆ ಮಹಾನಗರ ಪಾಲಿಕೆ: ಬಿಜೆಪಿಗೆ ಅಧಿಕಾರದ ಚುಕ್ಕಾಣಿ.....ಟಿ20 ವಿಶ್ವಕಪ್‌ ಅಭ್ಯಾಸ ಪಂದ್ಯ : ಭಾರತ ವನಿತೆಯರಿಗೆ ರೋಚಕ ಗೆಲುವು...

ಮಂಗಳೂರು: ಮಾದಕ ವಸ್ತು ಕೋಕೆನ್ ಮಾರಾಟ ಯತ್ನ: ಆರೋಪಿಗಳ ಸೆರೆ

ಮಂಗಳೂರು: ಮಂಗಳೂರು ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ ಕೋಕೆನ್ ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಇಕಾನಾಮಿಕ್ ಆ್ಯಂಡ್ ನಾರ್ಕೋಟಿಕ್ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಮಂಗಳೂರು ಪಳ್ನೀರ್‌ನ ಫಾಸೀಮ್ ನೌಷಿಬ್ (25), ಮಹಮ್ಮದ್ ಝಾಹಿದ್ (26) ಮಂಜೇಶ್ವರ ಕುಂಜೆತ್ತೂರಿನ ಅಪ್ಜಲ್ ಹುಸೈನ್ (28) ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ಮಂಗಳೂರು ನಗರದ ಪಡೀಲ್ ಕಂಕನಾಡಿ ಜಂಕ್ಷನ್ ರೈಲ್ವೇ ಸಿಬ್ಬಂದಿಗಳ ಸ್ಟಾಪ್ ಕ್ವಾಟ್ರಸ್ ಬಳಿ ಕಾರಿನ ಸಮೇತ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಅವರಿಂದ 30 ಗ್ರಾಂ ತೂಕದ ರೂ. 2,40,000/- ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ಕೋಕೆನ್, 4 ಮೊಬೈಲ್ ಫೋನ್, ಮಾರುತಿ ಕಂಪೆನಿಯ ಸ್ವೀಪ್ಟ್ ಕಾರು ಸೇರಿದಂತೆ ಅಂದಾಜು ಒಟ್ಟು ಮೌಲ್ಯ ರೂ. 10,000,00/- ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಇಕಾನಾಮಿಕ್ ಆ್ಯಂಡ್ ನಾರ್ಕೋಟಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾದಕ ವಸ್ತುವಿನ ಮಾರಾಟದ ಜಾಲದಲ್ಲಿ ಇನ್ನೂ ಇತರರು ಭಾಗಿಯಾಗಿದ್ದು, ಪ್ರಕರಣದಲ್ಲಿ ಹೆಚ್ಚಿನ ತನಿಖೆ ಮುಂದುವರಿದಿದೆ.

ಪೊಲೀಸ್ ಆಯುಕ್ತರಾದ ಡಾ. ಪಿ.ಎಸ್. ಹರ್ಷ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್ ನಾಯ್ಕ್, ಪಿ.ಎಸ್.ಐ ಕಬ್ಬಾಳ್ ರಾಜ್, ಸಿಸಿಬಿ ಘಟಕ ಸಿಬ್ಬಂದಿಗಳು ಹಾಗೂ ಇಕಾನಾಮಿಕ್ ಆ್ಯಂಡ್ ನಾರ್ಕೋಟಿಕ್ ಪೊಲೀಸ್ ಠಾಣೆಯ ಮಹಿಳಾ ಪಿ.ಎಸ್.ಐ ಲತಾ ಮತ್ತು ಅವರ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.

No Comments

Leave A Comment