Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಮಧ್ಯಪ್ರದೇಶ ಕಾರು ಅಪಘಾತ: ನಾಲ್ವರು ರಾಷ್ಟ್ರಮಟ್ಟದ ಹಾಕಿ ಆಟಗಾರರ ದುರ್ಮರಣ

ಹೊಶಾಂಗಬಾದ್: ಮಧ್ಯಪ್ರದೇಶದ ಹೊಶಾಂಗಬಾದ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ರಾಷ್ಟ್ರೀಯ ಹಾಕಿ ಆಟಗಾರರು ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದುವರೆಗೆ ಮೃತಪಟ್ಟ ಆಟಗಾರರ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ.

ಈ ಆಟಗಾರರು ಇತರಾಸಿಯಿಂದ ಹೊಶಂಗಾಬಾದ್ ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಧ್ಯಾನ್ ಚಂದ್ ಟ್ರೋಫಿ ಕೂಟದಲ್ಲಿ ಆಡಲು ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 69ರ ರೈಸಲಾ ಪುರ್ ದಲ್ಲಿ ಈ ಘಟನೆ ನಡೆದಿದೆ.

No Comments

Leave A Comment