Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ರೈತರ ಎಲ್ಲಾ ಸಾಲ ಮನ್ನಾ ಮಾಡಲಾಗಲ್ಲ: ಕೃಷಿಕರಿಗೆ ಶಾಕ್ ಕೊಟ್ಟ ಸಿಎಂ ಯಡಿಯೂರಪ್ಪ

ಬೆಳಗಾವಿ:  ರೈತರ ಎಲ್ಲಾ ಸಾಲವೂ ಮನ್ನಾ ಮಾಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

“ರಾಜ್ಯದಲ್ಲಿ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ, ನೆರೆಯಿಂದಾಗಿ ಅನೇಕ ಜಿಲ್ಲೆಗಳ ಜನ ಸಂಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅದರ ಹಣವನ್ನು ಪರಿಹಾರ ಕಾರ್ಯಕ್ಕೆ ಬಳಸಿಕೊಳ್ಲಲಾಗುತ್ತಿದೆ.” ಸುದ್ದಿಗಾರರಿಗೆ ಸಿಎಂ ತಿಳಿಸಿದ್ದಾರೆ.

ಉಪ ಚುನಾವಣೆಯಲ್ಲಿ 15 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಿ,ಟಿಕೆಟ್ ಅಂತಿಮ ಗೊಳಿಸಲಾಗುವುದು ಎಂದು ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಬುಧವಾರ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅಪಪ್ರಚಾರಕ್ಕೆ ಯಾವುದೇ ಅವಕಾಶ ಕೊಡುವ ಅಗತ್ಯವಿಲ್ಲ.ಅಕ್ಟೋಬರ್ 22ಕ್ಕೆ ಸುಪ್ರೀಂಕೋರ್ಟ್ ಏನು​ ತೀರ್ಪು ಬರುತ್ತದೆ ಎನ್ನುವುದನ್ನು ನೋಡಿಕೊಂಡು ಬಳಿಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸ ಲಾಗುತ್ತದೆ.ಈ ಉಪಚುನಾವಣೆ ಪಕ್ಷ ಹಾಗೂ ಸರ್ಕಾರಕ್ಕೆ ಬಹಳ ಮಹತ್ವದ್ದು.ಈ ಹಿನ್ನೆಲೆ ಯಲ್ಲಿ ಪ್ರತಿ ಕ್ಷೇತ್ರಕ್ಕೆ ಓರ್ವ ಸಚಿವರನ್ನು ಉಸ್ತು ವಾರಿಗಳನ್ನಾಗಿ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

No Comments

Leave A Comment