Log In
BREAKING NEWS >
ದಾವಣಗೆರೆ ಮಹಾನಗರ ಪಾಲಿಕೆ: ಬಿಜೆಪಿಗೆ ಅಧಿಕಾರದ ಚುಕ್ಕಾಣಿ.....ಟಿ20 ವಿಶ್ವಕಪ್‌ ಅಭ್ಯಾಸ ಪಂದ್ಯ : ಭಾರತ ವನಿತೆಯರಿಗೆ ರೋಚಕ ಗೆಲುವು...

ಜಾಲ್ಸೂರು ಮಾವಿನಕಟ್ಟೆ ಮತ್ತೊಂದು ಅಪಘಾತ: ಕಾರು ಸಂಪೂರ್ಣ ನಜ್ಜುಗುಜ್ಜು

ಸುಳ್ಯ : ಒಂದೇ ತಿಂಗಳಲ್ಲಿ ಭೀಕರ ಅಪಘಾತದಲ್ಲಿ ಏಳು ಜೀವ ಬಲಿ ಪಡೆದುಕೊಂಡಿರುವ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ಬಳಿ ಅ.17 ರಂದು ರಾತ್ರಿ ವಾಹನ ಅಫಘಾತ ಸಂಭವಿಸಿದೆ.

ಸುಳ್ಯದಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಶೆವರ್ಲೆ ಬೀಟ್ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಅಡ್ಕಾರ್ ಮಾವಿನ ಕಟ್ಟೆ ಬಳಿ ಢಿಕ್ಕಿ ಸಂಭವಿಸಿದೆ.

ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌.

ಇತ್ತೀಚೆಗೆ ನಡೆದ ಸರಣಿ ಅಪಘಾತದಲ್ಲಿ ಒಟ್ಟು 7 ಮಂದಿ ಅಸುನೀಗಿದ್ದರು‌. ಈ ಭೀಕರ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ನಡೆದಿದೆಯಾದರೂ ಯಾವುದೇ ಅಪಾಯವಿಲ್ಲದೆ ಪ್ರಯಾಣಿಕರು ಪಾರಾಗಿದ್ದಾರೆ.

No Comments

Leave A Comment