Log In
BREAKING NEWS >
ಉಡುಪಿಯ ಕಲ್ಸoಕದಲ್ಲಿನ ರಾಯಲ್ ಗಾರ್ಡನಲ್ಲಿ ಡಿ 3 ರಿ೦ದ ಉಡುಪಿ ಉತ್ಸವ ಆರ೦ಭಗೊಳ್ಳಲಿದೆ......ನವೆ೦ಬರ್ 26ರ೦ದು ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಭಾರತ – ಬಾಂಗ್ಲಾ ಕೊಲ್ಕತ್ತಾ ಟೆಸ್ಟ್ ಪಂದ್ಯಕ್ಕೆ ಶೇಕ್ ಹಸೀನಾ ಅತಿಥಿ

ಕೊಲ್ಕತ್ತಾ: ಮುಂದಿನ ತಿಂಗಳ ಅಂತ್ಯದಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯಲಿರುವ ಭಾರತ – ಬಾಂಗ್ಲಾ ನಡುವಿನ ಟೆಸ್ಟ್ ಪಂದ್ಯಕ್ಕೆ ಬಾಂಗ್ಲಾ ದೇಶ ಪ್ರಧಾನಿ ಶೇಕ್ ಹಸೀನಾ ಅವರಿಗೆ ಆಹ್ವಾನ ನೀಡಲಾಗಿದೆ.

ಬೆಂಗಾಲ್ ಕ್ರಿಕೆಟ್ ಸಮಿತಿ ಮೂಲಗಳು ಈ ಬಗ್ಗೆ ಹೇಳಿಕೆ ನೀಡಿದ್ದು, ಶೇಕ್ ಹಸೀನಾ ಆಗಮಿಸುವ ಬಗ್ಗೆ ಇನ್ನಷ್ಟೇ ಖಚಿತವಾಗಬೇಕಿದೆ.

ನವೆಂಬರ್ 22ರಿಂದ 26ರವರೆಗೆ ಭಾರತ ಮತ್ತು ಬಾಂಗ್ಲಾ ನಡುವಿನ ಟೆಸ್ಟ್ ಪಂದ್ಯ ನಡೆಯಲಿದೆ.

ಶೇಕ್ ಹಸೀನಾ ಅವರ ಕಚೇರಿಗೆ ಪತ್ರ ಬರೆದಿರುವುದು ನಿಜ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಕರೆಸುವ ಬಗ್ಗೆ ಪ್ರಯತ್ನಗಳಾಗುತ್ತಿವೆ ಎಂದು ಬೆಂಗಾಲ್ ಕ್ರಿಕೆಟ್ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.

No Comments

Leave A Comment