Log In
BREAKING NEWS >
ನವೆ೦ಬರ್ 26ರ೦ದು ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ..

ಅಯೋಧ್ಯೆ ಪ್ರಕರಣ: ಸುನ್ನಿ ವಕ್ಫ್ ಬೋರ್ಡ್ ನಿರ್ಧಾರಕ್ಕೆ ಮುಸ್ಲಿಂ ಅರ್ಜಿದಾರರ ವಿರೋಧ!

ನವದೆಹಲಿ: ಅಯೋಧ್ಯೆ ಭೂ ವಿವಾದ ಪ್ರಕರಣದ ವಿಚಾರಣೆ ಮುಕ್ತಾಯವಾದ ಬೆನ್ನಲ್ಲೇ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ನಿನ್ನೆಯಷ್ಟೇ ಸುನ್ನಿ ವಕ್ಫ್ ಬೋರ್ಡ್ ತನ್ನ ಅರ್ಜಿ ಹಿಂಪಡೆಯುವ ಕುರಿತು ಹೇಳಿಕೆ ನೀಡಿತ್ತು. ಆದರೆ ಇದಕ್ಕೆ ಮುಸ್ಲಿಂ ಅರ್ಜಿದಾರರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ನಲ್ಲಿ ಮುಸ್ಲಿಂ ಅರ್ಜಿದಾರರ ಪರ ವಕಾಲತ್ತು ವಹಿಸಿಕೊಂಡಿರುವ ವಕೀಲ ಏಜಾಜ್ ಮಕ್ಬೂಲ್ ಅವರು, ಪ್ರಕರಣವನ್ನು ಹಿಂಪಡೆಯುವ ಸುನ್ನಿ ವಕ್ಫ್ ಬೋರ್ಡ್ ನಿರ್ಧಾರ ತಮಗೆ ಆಘಾತ ತಂದಿದೆ ಎಂದು ಹೇಳಿದ್ದಾರೆ.

‘ಸುನ್ನಿ ವಕ್ಫ್ ಬೋರ್ಡ್ ನಿರ್ಧಾರಕ್ಕೆ ನಮ್ಮ ವಿರೋಧವಿದ್ದು, ಎಲ್ಲ ಮುಸ್ಲಿಂ ಅರ್ಜಿದಾರರು ಹಿಂದೂಗಳೊಂದಿಗಿನ ಹಾಲಿ ಸಂಧಾನವನ್ನು ತಿರಸ್ಕರಿಸಿವೆ. ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಸಂಧಾನ ಸಮಿತಿಯ ಸಂಧಾನವನ್ನುಸುನ್ನಿ ವಕ್ಫ್ ಬೋರ್ಡ್ ಹೊರತು ಪಡಿಸಿ ಉಳಿದೆಲ್ಲಾ ಮುಸ್ಲಿಂ ಅರ್ಜಿದಾರರು ವಿರೋಧಿಸಿದ್ದಾರೆ. ಅಲ್ಲದೆ ಸಂಧಾನವನ್ನು ಒಪ್ಪಲು ನಾವು ಸಿದ್ಧರಿಲ್ಲ. ಅದು ಸಾಧ್ಯ ಕೂಡ ಇಲ್ಲ. ಇದೊಂದು ಉದ್ದೇಶಿತ ಮತ್ತು ಮುಸ್ಲಿಮರಿಗೆ ಅನ್ಯಾಯವಾಗುವ ಸಂಧಾನವಾಗಿದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಅಯೋಧ್ಯೆ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸಂವಿಧಾನಿಕ ಪೀಠ 40 ದಿನಗಳ ವಿಚಾರಣೆ ಅಂತ್ಯಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ. ಏತನ್ಮಧ್ಯೆ ವಿವಾಧಿತ ಭೂ ಪ್ರದೇಶಕ್ಕೆ ಸಂಬಂಧಿಸಿದಂತೆ ತಾನು ಸಲ್ಲಿಸಿದ್ದ ಪ್ರಕರಣವನ್ನು ಹಿಂಪಡೆಯುವುದಾಗಿ ಹೇಳಿ ಸುನ್ನಿ ವಕ್ಫ್ ಬೋರ್ಡ್ ಅಚ್ಚರಿ ಮೂಡಿಸಿತ್ತು. ಸುನ್ನಿ ವಕ್ಫ್ ಬೋರ್ಡ್ ನ ನಿರ್ಧಾರಕ್ಕೆ ಇದೀಗ ಮುಸ್ಲಿಂ ಅರ್ಜಿದಾರರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.(ಸಾ೦ದರ್ಭಿಕ ಚಿತ್ರ)

No Comments

Leave A Comment