Log In
BREAKING NEWS >
ಅರ್ಧಕ್ಕೆ ನಿಂತ ಪರ್ಕಳ ರಾ. ಹೆದ್ದಾರಿ ಕಾಮಗಾರಿ: ಅಂಗಡಿ, ಮನೆಯೊಳಗೆ ಕೆಸರು ನೀರು....

ಭೂ ಸ್ವಾಧೀನ ಕಾಯ್ದೆ ವಿಚಾರಣೆಯಿಂದ ಹಿಂದೆ ಸರಿಯುವುದಿಲ್ಲ: ನ್ಯಾಯಮೂರ್ತಿ ಅರುಣ್ ಮಿಶ್ರಾ

ನವದೆಹಲಿ: ಭೂಸ್ವಾಧೀನ ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ಸಂವಿಧಾನ ಪೀಠದ ವಿಚಾರಣೆಯಿಂದ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಹಿಂದೆ ಸರಿಯುವುದಿಲ್ಲ ಎಂದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ ಆದೇಶ ನೀಡಿ, ನಾವು ಈ ವಿಚಾರಣೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದೆ.

ಹಲವು ರೈತಪರ ಸಂಘಟನೆಗಳು ಮತ್ತು ವ್ಯಕ್ತಿಗಳು ಈ ವಿಚಾರಣೆಯನ್ನು ನ್ಯಾಯಮೂರ್ತಿ ಅರುಣ್ ಮಿಶ್ರಾ ನಡೆಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದವು, ನ್ಯಾಯಮೂರ್ತಿ ಮಿಶ್ರಾ ಅವರು ತಾವೇ ಈ ಬಗ್ಗೆ ತೀರ್ಪು ನೀಡಿದ್ದರು. ಹೀಗಾಗಿ ಮತ್ತೆ ಅವರನ್ನು ವಿಚಾರಣೆಯಲ್ಲಿ ನೇಮಕ ಮಾಡಬಾರದೆಂದು ಹಲವರು ಆಕ್ಷೇಪಿಸಿದ್ದರು.

ಸಾಂವಿಧಾನಿಕ ಪೀಠದಲ್ಲಿ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ವಿನೀತ್ ಶರನ್, ಎಂ ಆರ್ ಶಾ ಮತ್ತು ಎಸ್ ರವೀಂದ್ರ ಭಟ್ ಕೂಡ ಇದ್ದಾರೆ.

No Comments

Leave A Comment