Log In
BREAKING NEWS >
~~~~~ನೂಲ ಹುಣ್ಣಿಮೆ ಹಬ್ಬ ಹಾಗೂ ರಕ್ಷಾ ಬ೦ಧನದ ಶುಭಾಶಯಗಳು~~~~

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಅ.23  ರಂದು ಕೋರ್ಟ್ ತೀರ್ಪು ಪ್ರಕಟಿಸಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಡಿ.ಕೆ ಶಿವಕುಮಾರ್ ಅವರಿಂದ ಸಾಕ್ಷ್ಯನಾಶದ ಸಾಧ್ಯತೆಗಳು ಕಡಿಮೆ ಇರುವುದನ್ನು ಮನಗಂಡ ನ್ಯಾಯಾಲಯ ಜಾಮೀನು ಮಂಜೂರು ಮಾಡಲು ಅನುಮತಿ ನೀಡಿದೆ.

25 ಲಕ್ಷ ರೂಪಾಯಿ ಬಾಂಡ್ ನೀಡುವುದು, ಪಾಸ್ಪೋರ್ಟ್ ನ್ನು ಕೋರ್ಟ್ ವಶಕ್ಕೆ ನೀಡಬೇಕು ಹಾಗೂ ವಿಚಾರಣೆಗೆ ಅಗತ್ಯವಿದ್ದಾಗ ಹಾಜರಾಗಬೇಕೆಂಬ ಷರತ್ತುಗಳನ್ನು ಕೋರ್ಟ್ ವಿಧಿಸಿದೆ.

No Comments

Leave A Comment