Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಈ ಬಾರಿ ನಡೆಯ ಬೇಕಾದ ಭಜನಾ ಸಪ್ತಾಹ ಮಹೋತ್ಸವವನ್ನು ಕೋವಿಡ್-19ರ ಕಾರಣದಿ೦ದ ಮು೦ದೂಡಲಾಗಿದ್ದು ಭಜನಾ ಸಪ್ತಾಹ ಮಹೋತ್ಸವವನ್ನು 2021ನೇ ವರುಷದ ಮಾರ್ಚನಲ್ಲಿ ನಡೆಯಲಿದೆ...

ವಿಧಾನಸಭೆ ಚುನಾವಣಾ ಫಲಿತಾಂಶ 2019: ಬಿಜೆಪಿ-ಶಿವಸೇನೆ ಮೈತ್ರಿಕೂಟಕ್ಕೆ ಭಾರಿ ಮುನ್ನಡೆ, ಹರ್ಯಾಣದಲ್ಲಿ ಕೈ-ಕಮಲ ಹಾವುಏಣಿ ಆಟ

ಮುಂಬೈ/ ಚಂಡೀಗಢ: ಮಹಾರಾಷ್ಟ್ರ-ಹರ್ಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದ್ದು, ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಬಿಜೆಪಿ-ಶಿವಸೇನೆ ಸರ್ಕಾರ ರಚನೆ ಖಾತ್ರಿಯಾಗಿದೆ. ಇತ್ತ ಹರ್ಯಾಣದಲ್ಲಿ ಅತಂತ್ರ ವಿಧಾನಸಭೆ ಎದುರಾಗಿದ್ದು, 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ 8 ಪಕ್ಷೇತರರ ಸಹಕಾರದೊಂದಿಗೆ ಸರ್ಕಾರ ರಚಿಸಲು ಯತ್ನಿಸುತ್ತಿದೆ.

ಒಟ್ಟು 288 ಸಂಖ್ಯಾಬಲ ಹೊಂದಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಧಿಕಾರಕ್ಕೇರಲು 145 ಶಾಸಕರ ಬೆಂಬಲ ಅಗತ್ಯವಿದೆ.  ಬಿಜೆಪಿ-ಶಿವಸೇನೆ ಮೈತ್ರಿ ಕೂಟದ ಒಟ್ಟು 159 ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದು ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಶಿವಸೇನೆ-ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಖಚಿತವಾಗಿದೆ.

ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಒಟ್ಟು 185 ಸ್ಥಾನಗಳಲ್ಲಿ ಗೆದ್ದಿತ್ತು. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ 159 ಸ್ಥಾನಗಳಲ್ಲಷ್ಟೇ ಗೆಲ್ಲಲು ಸಾಧ್ಯವಾಗಿದೆ. ಇನ್ನು ಹರ್ಯಾಣದ 90 ವಿಧಾನಸಭೆಯಲ್ಲಿ ಅಧಿಕಾರ ಹಿಡಿಯುವುದಕ್ಕೆ 46 ಸಂಖ್ಯಾಬಲದ ಅಗತ್ಯವಿದ್ದು, ಬಿಜೆಪಿ 40 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 34 ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು,  ದುಷ್ಯಂತ್ ಚೌಟಾಲ ನೇತೃತ್ವದ ಜೆಜೆಪಿ 10 ಸ್ಥಾನಗಳಲ್ಲಿ ಗೆದ್ದು ಕಿಂಗ್ ಮೇಕರ್ ಆಗಿದೆ. ಇನ್ನು 8 ಸ್ಥಾನಗಳಲ್ಲಿ ಗೆದ್ದಿರುವ ಪಕ್ಷೇತರರ ಸಹಾಯದೊಂದಿಗೆ ಸರ್ಕಾರ ರಚನೆ ಮಾಡಲು ಬಿಜೆಪಿ ಯತ್ನಿಸುತ್ತಿದೆ.  ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಹರ್ಯಾಣ ಪಕ್ಷೇತರರೊಂದಿಗೆ ಸೇರಿ ಸರ್ಕಾರ ರಚಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಇತ್ತ ತಮ್ಮನ್ನು ಸಿಎಂ  ಮಾಡಿದವರಿಗೆ ಬೆಂಬಲ ನೀಡುವುದಕ್ಕೆ ಸಿದ್ಧ ಎಂದು ದುಷ್ಯಂತ್ ಚೌಟಾಲಾ ಷರತ್ತು ವಿಧಿಸಿದ್ದಾರೆ. ಇನ್ನು ಹರ್ಯಾಣ ಮಾಜಿ ಸಿಎಂ ಭೂಪೇಂದ್ರ ಸಿಂಗ್ ಹರ್ಯಾಣದಲ್ಲಿ ಬಿಜೆಪಿಯೇತರ ಪಕ್ಷಗಳೆಲ್ಲಾ ಒಗ್ಗೂಡಿ ಸರ್ಕಾರ ರಚನೆ ಮಾಡಬೇಕು ಎಂದು  ಹೇಳಿದ್ದಾರೆ.

No Comments

Leave A Comment