Log In
BREAKING NEWS >
2019ರ ವಿಶ್ವ ಸುಂದರಿ ಪ್ರಕಟ: ಭಾರತದ ಸುಮನ್ ರಾವ್ ದ್ವಿತೀಯ ರನ್ನರ್ ಅಪ್....ಫಾಸ್ಟ್ ಟ್ಯಾಗ್ ಕಡ್ಡಾಯ: ಲಾಸ್ಟ್ ಸ್ಟಾಪ್ ಬದಲಾಯಿಸಿದ ಖಾಸಗಿ ಬಸ್ ಗಳು...

ಕುಣಿಗಲ್’ನಲ್ಲಿ ಭೀಕರ ಅಪಘಾತ: ಕಾರು-ಟ್ರ್ಯಾಕ್ಟರ್ ಡಿಕ್ಕಿ, ಐವರ ದುರ್ಮರಣ

ತುಮಕೂರು: ವೇಗವಾಗಿ ಬರುತ್ತಿದ್ದ ಕಾರೊಂದು ಟ್ರ್ಯಾಕ್ಟರ್’ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕು ಅಮೃತೂರು ಹೋಬಳಿ ಹೊಸಕೆರೆ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಕಿರಣ್ (24), ರಾಜಣ್ಣ (55), ಮೋಹನ್ (22), ಮಧು (26), ರಂಗಸ್ವಾಮಿ (58) ಎಂದು ಗುರ್ತಿಸಲಾಗಿದೆ. ಮೃತರೆಲ್ಲರೂ ದೊಡ್ಡಕಲ್ಲಹಳ್ಳಿ ಗ್ರಾಮದವರೆಂದು ತಿಳಿದುಬಂದಿದೆ.

ಹಬ್ಬಕ್ಕೆ ಊರಿಗೆ ತೆರಳಿದ್ದ ಮೃತ ವ್ಯಕ್ತಿಗಳು ಮನೆಗೆ ವಾಪಸಾಗುತ್ತಿದ್ದರು. ಈ ವೇಳೆ ಚಾಲಕ ಕಾರಿನ ಮೇಲಿದ್ದ ನಿಯಂತ್ರಣವನ್ನು ಕಳೆದುಕೊಂಡು ರಸ್ತೆಯಲ್ಲಿ ತೆರಳುತ್ತಿದ್ದ ಟ್ರ್ಯಾಕ್ಟರ್’ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment