Log In
BREAKING NEWS >
ಅರ್ಧಕ್ಕೆ ನಿಂತ ಪರ್ಕಳ ರಾ. ಹೆದ್ದಾರಿ ಕಾಮಗಾರಿ: ಅಂಗಡಿ, ಮನೆಯೊಳಗೆ ಕೆಸರು ನೀರು....

ಉಡುಪಿಯಲ್ಲಿ ಚಿಟ್ಟಾಣಿ ಸಂಸ್ಮರಣಾ ಸಪ್ತಾಹ – 2019 ದ ಸಮಾರೋಪ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ,ಶ್ರೀವೀರಾಂಜನೇಯ ಯಕ್ಷಮಿತ್ರ ಮಂಡಳಿ,ಬಂಗಾರಮಕ್ಕಿ ಮತ್ತು ಅತಿಥಿ ಕಲಾವಿದರ ಸಹಯೋಗದೊಂದಿಗೆ ಚಿಟ್ಟಾಣಿ ಅಭಿಮಾನಿ ಬಳಗ, ಉಡುಪಿ ಆಯೋಜಿಸಿದ ಚಿಟ್ಟಾಣಿ ಸಂಸ್ಮರಣಾ ಸಪ್ತಾಹ – 2019 ದ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮುಮ್ಮೇಳ ಕಲಾವಿದರಾದ ಶ್ರೀಪಾದ ಹೆಗಡೆ ಹಾಡಿನಬಾಳ ಇವರಿಗೆ ಹೆಗಡೆ ಪ್ರಶಸ್ತಿ ಹಾಗೂ ಹಿಮ್ಮೇಳ ಕಲಾವಿದರಾದ ಪ್ರವೀಎಂ ಕುಮಾರ್ ನಂದಳಿಕೆ ಇವರಿಗೆ ಟಿ.ವಿ.ರಾವ್ ಪ್ರಶಸ್ತಿಯನ್ನು ನೀಡಿ ಇತಿಹಾಸದ ಕಥೆಗಳನ್ನು ಕಣ್ಣಿಗೆ ಕಟ್ಟುವಂತೆ ಪ್ರಸ್ತುತಪಡಿಸುವ ನಮ್ಮೂರಿನ ಶ್ರೀಮಂತ ಕಲೆ ಯಕ್ಷಗಾನ ಕಲಾವಿದರ ಪರಿಶ್ರಮ ಮತ್ತು ಪ್ರೇಕ್ಷಕರ ಪ್ರೋತ್ಸಾಹದಿಂದ ಮುಂದುವರಿಯುತ್ತದೆ, ನಾಡಿನ ಕಲೆ ಹಾಗೂ ಕಲಾವಿದ ಇನ್ನಷ್ಟು ಶ್ರೀಮಂತವಾಗಲಿ ಎಂದು ಹರಸಿದರು.

ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಸಾನ್ನಿಧ್ಯವಹಿಸಿದ್ದರು.ಈ ಸಂದರ್ಭದಲ್ಲಿ ನರಸಿಂಹ ಚಿಟ್ಟಾಣಿ, ತಲ್ಲೂರು ಶಿವರಾಂ ಶೆಟ್ಟಿ ,ಗಂಗಾಧರ ರಾವ್,ಗಣೇಶ್ ರಾವ್ ಮೊದಲಾದವರು ಉಪಸ್ಥಿತರಿದ್ದರು.


ನಾರಾಯಣ ಎಂ.ಹೆಗಡೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

No Comments

Leave A Comment