Log In
BREAKING NEWS >
ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಬಿಜೆಪಿ ಸರಕಾರದಿಂದ ಪ್ರವಾಹ ಸಂತ್ರಸ್ತರಿಗೆ ಬದುಕು ಕಟ್ಟಿಕೊಡುವ ಸಂಕಲ್ಪ: ಜಗದೀಶ್ ಶೆಟ್ಟರ್

ಬೆಳಗಾವಿ:  ಗಡಿ ಭಾಗದ ಜಿಲ್ಲೆ ಬೆಳಗಾವಿ ಯಲ್ಲಿ  ಕನ್ನಡದ ಹಬ್ಬಕ್ಕೆ ಅದ್ದೂರಿ ಚಾಲನೆ ನೀಡಲಾಗಿದೆ.  ಬೆಳಗಾವಿಯ ಸಿ.ಪಿ.ಎಡ್ ಮೈದಾನದಲ್ಲಿ ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಬೆಳಗಾವಿ ‌ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ರೈಲ್ವೆ ಸಚಿವ ಸುರೇಶ ಅಂಗಡಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ರಾಜ್ಯೋತ್ಸವದ ಅದ್ದೂರಿ ಮೆರವಣಿಗೆಗೆ ಚಾಲನೆ ನೀಡಿದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರವು ಆಡಳಿತದಲ್ಲಿ ಜನಪರ ಕಾರ್ಯಕ್ರಮಗಳನ್ನು ರೂಪಿಸುವದರ ಜೊತೆಗೆ ಪ್ರವಾಹ ಸಂತ್ರಸ್ತರಿಗೆ ಬದುಕು ಕಟ್ಟಿಕೊಡುವ ದೃಢ ಸಂಕಲ್ಪ ಮಾಡಿದೆ.  ನೂರು ದಿನಗಳನ್ನು ಪೂರೈಸುತ್ತಿರುವ ನಮ್ಮ ಸರಕಾರವು ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ.

No Comments

Leave A Comment