Log In
BREAKING NEWS >
ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಮಹಾರಾಷ್ಟ್ರದಲ್ಲಿ ಶಿವಸೇನೆ ನಾಯಕ ಮುಖ್ಯಮಂತ್ರಿಯಾಗುತ್ತಾರೆ: ಸಂಜಯ್ ರಾವತ್

ಮುಂಬೈ: ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ವಿಷಯದಲ್ಲಿ ಬಿಜೆಪಿ ಜೊತೆ ಭಿನ್ನಮತ ಹೊಂದಿರುವ ಮೈತ್ರಿಪಕ್ಷ ಶಿವಸೇನೆ ಶುಕ್ರವಾರ ಹೇಳಿಕೆ ನೀಡಿದ್ದು, ಶಿವಸೇನೆ ನಾಯಕರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಾರೆ ಎಂದಿದೆ.


ಶಿವಸೇನೆಯ ಹಿರಿಯ ನಾಯಕ ಸಂಜಯ್ ರಾವತ್ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ರಚನೆ ಬಗ್ಗೆ ಎರಡೂ ಪಕ್ಷಗಳ ಮಧ್ಯೆ ಯಾವುದೇ ಮಾತುಕತೆಗಳು ನಡೆದಿಲ್ಲ. ಶಿವಸೇನೆಯಿಂದ ಮಹಾರಾಷ್ಟ್ರ ಮುಖ್ಯಮಂತ್ರಿಯಾಗುತ್ತಾರೆ ಎಂದು ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ.

ಸರ್ಕಾರ ರಚನೆಯಲ್ಲಿ ಬಿಜೆಪಿ ಮುಂದೆ ನಾವು ಯಾವುದೇ ದೊಡ್ಡ ಬೇಡಿಕೆಯನ್ನು ಮುಂದಿಟ್ಟಿಲ್ಲ, ಅವರ ಜೊತೆ ಮಾತುಕತೆಯೂ ನಡೆಸಿಲ್ಲ, ಅವರು ದೊಡ್ಡ ಮನುಷ್ಯರು. ಶಿವಸೇನೆ ತೀರ್ಮಾನಿಸಿದರೆ ಸ್ಥಿರ ಸರ್ಕಾರ ರಚಿಸಲು ಬೇಕಾದಷ್ಟು ಸದಸ್ಯರ ಬೆಂಬಲ ಸಿಗಲಿದ್ದು ಸರ್ಕಾರ ರಚಿಸಲು ಸಾಧ್ಯವಿದೆ ಎಂದರು.

50:50 ಸೂತ್ರದ ಪ್ರಕಾರ ಸರ್ಕಾರ ರಚಿಸಲು ರಾಜ್ಯದ ಜನತೆ ತೀರ್ಪು ಕೊಟ್ಟಿದ್ದಾರೆ. ಮಹಾರಾಷ್ಟ್ರ ಜನತೆ ಮುಂದೆ ಆದ ತೀರ್ಮಾನವಿದು ಎಂದು ಕೂಡ ಹೇಳಿದರು.

50:50 ಸೂತ್ರದಂತೆ ಖಾತೆಗಳ ಹಂಚಿಕೆ ಮಾಡಿ ಎರಡೂ ಪಕ್ಷಗಳಿಂದ ಎರಡೂವರೆ ವರ್ಷಗಳ ಕಾಲ ಒಬ್ಬೊಬ್ಬರು ಸಿಎಂ ಹುದ್ದೆ ವಹಿಸಲಿ ಎಂಬುದು ಶಿವಸೇನೆಯ ಬೇಡಿಕೆಯಾಗಿದೆ. ಆದರೆ ಬಿಜೆಪಿ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ದೇವೇಂದ್ರ ಫಡ್ನವಿಸ್ ಅವರೇ 5 ವರ್ಷಗಳ ಕಾಲ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಹೇಳಿದೆ.

ಇದಿನ್ನು ಯಾವ ಮಟ್ಟಕ್ಕೆ ಹೋಗುತ್ತದೆ, ಮಹಾರಾಷ್ಟ್ರದಲ್ಲಿ ಯಾರು ಸರ್ಕಾರ ರಚನೆ ಮಾಡುತ್ತಾರೆ ಎಂಬುದು ಸದ್ಯದ ಕುತೂಹಲವಾಗಿದೆ.

No Comments

Leave A Comment